ಮೈಸೂರು(Mysuru): ಸಾಮಾಜಿಕ ಜಾಲಾತಾಣದಲ್ಲಿ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದವನ ವಿರುದ್ಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಯೂತ್ ಕಾಂಗ್ರೆಸ್ ದೂರು ದಾಖಲಿಸಿದೆ.
ಭಾನುವಾರ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, 2023ರ ಎಲೆಕ್ಷನ್ ನನ್ನ ಕೊನೆಯ ಚುನಾವಣೆ, ಮುಂದೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದ್ದಿಲ್ಲ ಎಂದು ಹೇಳಿಕೆ ನೀಡಿದ್ದರು.
ಸಿದ್ದರಾಮಯ್ಯ ಅವರ ಹೇಳಿಕೆಗೆ ಹುಣಸೂರು ತಾಲೂಕಿನ ಕಲ್ಕೂಡಿಕೆ ಗ್ರಾಮದ ಗೋವಿಂದ ನಾಯಕ ಎಂಬುವ ವ್ಯಕ್ತಿಯು, ‘ನೀನು ಎಲ್ಲೇ ನಿಂತರು ಸೋಲು, ನಿನ್ನಂತಹ ದುರಹಂಕಾರಿ ದೇಶದಲ್ಲೇ ಯಾರೂ ಇಲ್ಲಾ’ ಎಂದು ಅವಹೇಳನಕಾರಿ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದಾರೆ.
ಈ ಪೋಸ್ಟ್ ಅವಹೇಳನಕಾರಿ ಹಾಗೂ ಶಾಂತಿ ಕದಡುವ ರೀತಿಯಲ್ಲಿದೆ. ನಂತರ ಕೂಡಲೇ ಈ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಯೂತ್ ಕಾಂಗ್ರೆಸ್, ದೂರು ದಾಖಲಿಸಿದೆ.