ಹುಬ್ಬಳ್ಳಿ: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು ಸೋಲಿನ ಹತಾಶೆ ಯಿಂದ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪಕ್ಕೆ ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಕಾರಣವಿಲ್ಲದೆ ಭ್ರಷ್ಟ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ನವರು ಆರೋಪ ರಾಜ್ಯದ ಜನತೆಗೆ ಮಾಡಿದ ಅವಮಾನವಾಗಿದೆ ಎಂದು ಹೇಳಿದರು.
ಜನ ಎಲ್ಲವನ್ನು ನೋಡುತ್ತಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ನೂರಕ್ಕೆ ನೂರಷ್ಟು ಖಚಿತ. ಇದನ್ನು ಅರಿತು ನನ್ನ ವಿರುದ್ಧ ವೈಯಕ್ತಿಕ ದಾಳಿಗೆ ಮುಂದಾಗಿದ್ದಾರೆ ಎಂದು ಸಿಎಂ ಆರೋಪಿಸಿದರು.