ಮನೆ ರಾಜ್ಯ ದೇವನಹಳ್ಳಿ ಭೂ ಸ್ವಾಧೀನ ಪ್ರಕರಣ: ಜುಲೈ 15ಕ್ಕೆ ಮತ್ತೆ ರೈತರೊಂದಿಗೆ ಸಭೆ

ದೇವನಹಳ್ಳಿ ಭೂ ಸ್ವಾಧೀನ ಪ್ರಕರಣ: ಜುಲೈ 15ಕ್ಕೆ ಮತ್ತೆ ರೈತರೊಂದಿಗೆ ಸಭೆ

0

ಬೆಂಗಳೂರು : ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಶುಕ್ರವಾರ ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಈ ಸಂಬಂಧ ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಾಕಾಶ ಬೇಕಿದ್ದು ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ ೧೫ ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.
ಪೊಲೀಸ್ ಕ್ರಮ: ಎಂಎಲ್‌ಸಿ ರವಿಕುಮಾರ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ, ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಸೂಕ್ತ ಪೊಲೀಸ್ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.