ರಾಮನಗರ: ಹಾಸನ ಕ್ಷೇತ್ರದ ಟಿಕೆಟ್ ಅನ್ನು ದೇವೇಗೌಡರು ಫೈನಲ್ ಮಾಡಲಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಚನ್ನಪಟ್ಟಣದಲ್ಲಿ ಸೋಮವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯು ಇಂದು ಸಂಜೆ ( ಸೋಮವಾರ) ಬಿಡುಗಡೆ ಆಗಲಿದೆ ಎಂದರು.
ಹಾಸನ ವಿಚಾರದಲ್ಲಿ ನನ್ನ ನಿಲುವು ಬದಲಾಗುವುದಿಲ್ಲ. ಹಾಸನದಲ್ಲಿ ಜನಾಭಿಪ್ರಾಯ ಹಾಗೂ ಕಾರ್ಯಕರ್ತರ ಅಭಿಪ್ರಾಯವನ್ನು ಪರಿಗಣಿಸಲಾಗುತ್ತದೆ ಎಂದರು.
ಸಾತನೂರಿನಲ್ಲಿ ಜಾನುವಾರು ಸಾಗಣೆ ಮಾಡುತ್ತಿದ್ದವರ ಮೇಲೆ ದಾಳಿ ಮಾಡಿರುವ ಪುನೀತ್ ಹಾಗೂ ಸಹಚರರನ್ನು ಕೂಡಲೇ ಬಂಧಿಸಬೇಕು ಎಂದು ಅವರು ಆಗ್ರಹಿಸಿದರು.
Saval TV on YouTube