ಮನೆ ರಾಜಕೀಯ ದೇವೇಗೌಡರದು ಬಿಜೆಪಿ ಜೊತೆಗೆ ಹೊಸ ಪ್ರೇಮ, ಅವರು ಕಾವೇರಿ ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ: ಸಿಎಂ...

ದೇವೇಗೌಡರದು ಬಿಜೆಪಿ ಜೊತೆಗೆ ಹೊಸ ಪ್ರೇಮ, ಅವರು ಕಾವೇರಿ ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ: ಸಿಎಂ ಸಿದ್ದರಾಮಯ್ಯ

0


ಮೈಸೂರು: ಕಾವೇರಿ ನೀರು ವಿಚಾರವಾಗಿ ದೇವೇಗೌಡರು ಪ್ರಧಾನ ಮಂತ್ರಿಗೆ ಪತ್ರ ಬರೆದಿರುವುದನ್ನು ನಾವು ಸ್ವಾಗತಿಸುತ್ತೇವೆ. ಈಗ ಅವರದು ಬಿಜೆಪಿ ಜೊತೆಗೆ ಹೊಸ ಪ್ರೇಮ.‌ ಅವರು ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ. ಆದರೆ ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಲಿಲ್ಲ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿರುವುದನ್ನು ನಾವು ಒಪ್ಪುವುದಿಲ್ಲ. ಸರ್ಕಾರ ಎಲ್ಲಾ ಹಂತದಲ್ಲೂ ನಾಡಿನ ಜನರ ರಕ್ಷಣೆಗೆ ಬದ್ಧವಾಗಿಯೇ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿ ಮಾಧ್ಯಮದವರೊಂದಿಗೆ ಮಾತನಾಡಿ, ಕಾನೂನು ತಜ್ಞರು ಸರಿಯಾಗಿ ವಾದ ಮಾಡಿಲ್ಲ ಎಂಬ ಆರೋಪ ಸುಳ್ಳು. ಹಿಂದಿನ ಎಲ್ಲಾ ಸರ್ಕಾರಗಳು ಇದ್ದಾಗಲೂ ಇದ್ದ ಲೀಗಲ್ ಟೀಮ್ ಈಗಲೂ ಇರೋದು. ಅವರೇ ವಾದ ಮಾಡಿದ್ದಾರೆ. ಕಾನೂನು ತಜ್ಞರಲ್ಲಿ ಯಾವ ಬದಲಾವಣೆ ಆಗಿಲ್ಲ. ಹೀಗಾಗಿ ಸಮರ್ಥ ವಾದ ಮಂಡಿಸಿಲ್ಲ ಎಂಬುದರಲ್ಲಿ ಅರ್ಥವಿಲ್ಲ‌ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚಾಮರಾಜನಗರ ಜಿಲ್ಲೆಯಲ್ಲಿ ಇಂದು ಸಿಎಂ ವಾಸ್ತವ್ಯ ವಿಚಾರಕ್ಕೆ ಪ್ರತಿಕ್ರಿಯಿಸಿ, ಚಾಮರಾಜನಗರಕ್ಕೆ ಭೇಟಿ ನೀಡಿದರೆ ಅಧಿಕಾರ ಹೋಗುತ್ತೆ ಅನ್ನೋ‌ ವಿಚಾರ ಸುಳ್ಳು. ನಾನು ಗಟ್ಟಿಯಾಗಿದ್ದೇನೆ. ಗಟ್ಟಿಯಾಗೇ ಇರುತ್ತೇನೆ. ನೀವು ನನ್ನನ್ನು ವೀಕ್ ಮಾಡಲು ಯತ್ನಿಸುತ್ತೀರಾ, ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗುತ್ತೆ ಅನ್ನೊ ಅಪವಾದ ಇಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಇದೇ ವೇಳೆ ಚಾಮರಾಜನಗರಕ್ಕೆ ಹೋಗುತ್ತಿರುವುದೇ ಗಟ್ಟಿಯಾಗಿ ಇರುವುದಕ್ಕೆ ಎಂದು ಪಕ್ಕದಲ್ಲೇ ಇದ್ದ ಸಚಿವರಾದ ಡಾ. ಹೆಚ್.ಸಿ ಮಹದೇವಪ್ಪ, ಕೆ.ವೆಂಕಟೇಶ್ ಒಟ್ಟಾಗಿ ನುಡಿದರು.

ಬಿಜೆಪಿಯಿಂದ ಚಡ್ಡಿ ಚಳುವಳಿ ವಿಚಾರವಾಗಿ ಮಾತನಾಡಿ,‌ ಬಿಜೆಪಿಯವರನ್ನ ನಾವೂ ಮೊದಲಿನಿಂದಲೂ ಚಡ್ಡಿಗಳು ಎಂದೇ ಕರೆಯುತ್ತಿದ್ದೇವೆ. ಈಗ ಅವ್ರು ಚಡ್ಡಿ ಚಳುವಳಿ ಮಾಡ್ತಿದ್ದಾರೆ‌. ಮಾಡಲಿ ಬಿಡಿ ಎಂದರು.

ರಾಜ್ಯ ಕಾಂಗ್ರೆಸ್ ಡಿಎಂಕೆ ಬಿ ಟೀಮ್ ಎಂಬ ಹೆಚ್ಡಿಕೆ ಆರೋಪ ವಿಚಾರವಾಗಿ ಮಾತನಾಡಿ, ಎಐಡಿಎಂಕೆ ಬಿಜೆಪಿ ಜೊತೆ ಇತ್ತಲ್ಲ ಆಗ ಅದು ಯಾವ ಟೀಮ್..?
ಸುಮ್ಮನೆ ರಾಜಕೀಯ ಕಾರಣಕ್ಕೆ ಎನೇನೋ ಹೇಳಿಕೆ ಕೊಡಬಾರದು. ಸುಮ್ಮನೆ ಬಿ ಟೀಮ್ ಎ ಟೀಮ್ ಅನ್ನಬಾರದು ಎಂದು ತಿರುಗೇಟು ನೀಡಿದರು.

ಕಾವೇರಿ ನೀರು ಪ್ರಸ್ತುತ ವರದಿಗಾಗಿ ಕೇಂದ್ರದ ತಂಡ ಆಗಮಿಸುವ ವಿಚಾರವಾಗಿ ಮಾತನಾಡಿ, ಪಿಎಂ ಮಧ್ಯಸ್ಥಿಕೆ ವಹಿಸಬೇಕು. ಕೇಂದ್ರದಿಂದ ತಜ್ಞರ ತಂಡ ಬರಬೇಕು.‌ ಇದನ್ನ ನಾನು ಎರಡು ಬಾರಿ ಕೇಂದ್ರಕ್ಕೆ ಕೇಳಿದ್ದೇನೆ. ದೇವೇಗೌಡ್ರು ಕೂಡ ಈಗ ಪತ್ರ ಬರೆದು ಕೇಳಿದ್ದಾರೆ. ಈಗಲಾದರೂ ಕೇಂದ್ರದಿಂದ ತಂಡ ಬರಲಿ.
ಯಾಕೆ ಕೇಂದ್ರದ ತಂಡ ಬರ್ತಿಲ್ಲ ಅಂತಾ ಬಿಜೆಪಿಯವ್ರು ಹೇಳಲಿ. ಬಿಜೆಪಿಯವ್ರು ಹಾದಿಬೀದಿಯಲ್ಲಿ ಹೋರಾಟ ಮಾಡುವ ಬದಲು ಕೇಂದ್ರದಿಂದ ತಜ್ಞರ ತಂಡ ಕರೆಸಲಿ ಎಂದು ಒತ್ತಾಯಿಸಿದರು.
ಕೋರ್ಟ್ ಮಧ್ಯಸ್ಥಿಕೆ ಇಲ್ಲದೆ ಎರಡು ರಾಜ್ಯ ಕೂತು ಮಾತುಕತೆಗೆ ಈಗಲೂ ನಾವೂ ಸಿದ್ದವಿದ್ದೇವೆ ಸಿಎಂ ಸಿದ್ದರಾಮಯ್ಯ ಹೇಳಿದರು.

ಹಿಂದಿನ ಲೇಖನಕಾವೇರಿ ವಿವಾದ: ಕೇಂದ್ರ ಸರ್ಕಾರ ಮತ್ತು ಬಿಜೆಪಿ  ಕನ್ನಡಪರ ಸಂಘಟನೆ, ರೈತರ ಜೊತೆಗಿದೆ- ಶೋಭಾ ಕರಂದ್ಲಾಜೆ
ಮುಂದಿನ ಲೇಖನಹಿರಿಯ ನಟ ಬ್ಯಾಂಕ್ ಜನಾರ್ದನ್ ಗೆ ಹೃದಯಾಘಾತ