ಮನೆ ರಾಷ್ಟ್ರೀಯ 3ನೇ ಬಾರಿ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ

3ನೇ ಬಾರಿ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪ್ರಮಾಣ ವಚನ

0

ಮುಂಬಯಿ: ಇಲ್ಲಿನ ಅಜಾದ್ ಮೈದಾನದಲ್ಲಿ ಗುರುವಾರ(ಡಿ5) ಸಂಜೆ ನಡೆದ ಅದ್ದೂರಿ ಸಮಾರಂಭದಲ್ಲಿ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಐದು ವರ್ಷಗಳ ನಂತರ ಫಡ್ನವಿಸ್ ಮುಖ್ಯಮಂತ್ರಿಯಾಗಿ ಮರಳಿದ ಹಿನ್ನೆಲೆಯಲ್ಲಿ ಆಜಾದ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿ ಬಾಲಿವುಡ್ ನ ಗಣ್ಯಾತೀಗಣ್ಯರು ಭಾಗವಹಿಸಿದ್ದರು.

Join Our Whatsapp Group

ಫಡ್ನವೀಸ್ ಅವರ ಮಹಾಯುತಿ ಮಿತ್ರ ಪಕ್ಷ ಶಿವಸೇನೆಯ ಏಕನಾಥ್ ಶಿಂಧೆ ಮತ್ತು ಎನ್‌ಸಿಪಿಯ ಅಜಿತ್ ಪವಾರ್ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಪ್ರಮಾಣವಚನ ಬೋಧಿಸಿದರು.

ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಜೆಪಿ ನಡ್ಡಾ ಮತ್ತು ಇತರ ಬಿಜೆಪಿ ನಾಯಕರು, ಬಾಲಿವುಡ್ ನ ಹಲವು ನಟರು ಸಮಾರಂಭದಲ್ಲಿ ಭಾಗಿಯಾಗಿದ್ದರು.

ಶಾರುಖ್ ಖಾನ್, ಸಲ್ಮಾನ್ ಖಾನ್ ಮತ್ತು ರಣಬೀರ್ ಕಪೂರ್ ಸೇರಿದಂತೆ ಬಾಲಿವುಡ್ ನ ಟಾಪ್ ಸ್ಟಾರ್ ಗಳು ಈವೆಂಟ್ ನಲ್ಲಿ ಭಾಗವಹಿಸಿದ್ದರು. ಕೈಗಾರಿಕೋದ್ಯಮಿಗಳಾದ ಮುಖೇಶ್ ಅಂಬಾನಿ, ಅನಿಲ್ ಅಂಬಾನಿ, ಅನಂತ್ ಅಂಬಾನಿ ಮತ್ತು ಕುಮಾರ್ ಮಂಗಳಂ ಬಿರ್ಲಾ ಕೂಡ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಯೋಗಿ ಆದಿತ್ಯನಾಥ್, ಭಜನ್‌ಲಾಲ್ ಶರ್ಮಾ, ಪುಷ್ಕರ್ ಸಿಂಗ್ ಧಾಮಿ, ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್, ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್,  ಅವರ ಪತ್ನಿ ಅಂಜಲಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಸುಮಾರು 40,000 ಜನರು ಪಾಲ್ಗೊಂಡಿದ್ದರು.