ಮನೆ ದೇವರ ನಾಮ ಶರಣೆಂಬೆ ವಾಣಿ ಪೊರೆಯೆ ಕಲ್ಯಾಣಿ

ಶರಣೆಂಬೆ ವಾಣಿ ಪೊರೆಯೆ ಕಲ್ಯಾಣಿ

0

ಶರಣೆಂಬೆ ವಾಣಿ ಪೊರೆಯೆ ಕಲ್ಯಾಣಿ

ವಾಗಭಿಮಾನಿ ವರ ಬ್ರಹ್ಮಾಣಿ

ಸುಂದರವೇಣಿ ಸುಚರಿತ್ರಾಣಿ

ಜಗದೊಳು ನಿಮ್ಮ ಪೊಗಳುವೆನಮ್ಮ

ಹರಿಯ ತೋರಿಸೆಂದು ಪ್ರಾರ್ಥಿಪೆನಮ್ಮ

ಪಾಡುವೆ ಶ್ರುತಿಯ ಬೇಡುವೆ ಮತಿಯ

ಪುರಂದರವಿಠಲನ ಸೋದರಸೊಸೆಯ