ಮನೆ ದೇವರ ನಾಮ ರಾಮನಾಮ ಪಾಯಸಕ್ಕೆ ಕೃಷ್ಣನಾಮ ಸಕ್ಕರೆ

ರಾಮನಾಮ ಪಾಯಸಕ್ಕೆ ಕೃಷ್ಣನಾಮ ಸಕ್ಕರೆ

0

ರಾಮನಾಮ ಪಾಯಸಕ್ಕೆ ಕೃಷ್ಣನಾಮ ಸಕ್ಕರೆ

ವಿಠಲನಾಮ ತುಪ್ಪವ ಬೆರೆಸಿ ಬಾಯಿ ಚಪ್ಪರಿಸಿರೊ||pa||

ಒಮ್ಮನ ಗೋಧಿಯ ತಂದು ವೈರಾಗ್ಯ ಕಲ್ಲಲಿ ಬೀಸಿ

ಸುಮ್ಮನ ಸಜ್ಜಿಗೆ ತೆಗೆದು ಸಣ್ಣ ಸೇವೆಗೆ ಹೊಸೆದು|

ಹೃದಯವೆಂಬೊ ಪಾತ್ರೆಯೊಳಗೆ ಭಾವವೆಂಬೊ ಎಸರು ಇಟ್ಟು

ಬುದ್ದಿಯಿಂದ ಪಕ್ವವ ಮಾಡಿ ಹರಿವಾಣದೊಳಗೆ ನೀಡಿ|

ಆನಂದ ಆನಂದವೆಂಬೊ ತೇಗು ಬಂದ ಪರಿಯಲಿ

ಆನಂದಮೂರುತಿ ನಮ್ಮ ಪುರಂದರವಿಠಲ ನೆನೆಯಿರೊ||

ಹಿಂದಿನ ಲೇಖನಮುಖ್ಯಮಂತ್ರಿಗಳಿಂದ ಜನರನ್ನು ಎತ್ತಿಕಟ್ಟುವ ಆರೋಪ
ಮುಂದಿನ ಲೇಖನಹೈ ಬಿಪಿ-ಶುಗರ್ ಸಮಸ್ಯೆಯನ್ನು ತಗ್ಗಿಸಲು ಹೆಸರು ಕಾಳು ಸೇವಿಸಿ