ರಾಮನಾಮ ಪಾಯಸಕ್ಕೆ ಕೃಷ್ಣನಾಮ ಸಕ್ಕರೆ
ವಿಠಲನಾಮ ತುಪ್ಪವ ಬೆರೆಸಿ ಬಾಯಿ ಚಪ್ಪರಿಸಿರೊ||pa||
ಒಮ್ಮನ ಗೋಧಿಯ ತಂದು ವೈರಾಗ್ಯ ಕಲ್ಲಲಿ ಬೀಸಿ
ಸುಮ್ಮನ ಸಜ್ಜಿಗೆ ತೆಗೆದು ಸಣ್ಣ ಸೇವೆಗೆ ಹೊಸೆದು|
ಹೃದಯವೆಂಬೊ ಪಾತ್ರೆಯೊಳಗೆ ಭಾವವೆಂಬೊ ಎಸರು ಇಟ್ಟು
ಬುದ್ದಿಯಿಂದ ಪಕ್ವವ ಮಾಡಿ ಹರಿವಾಣದೊಳಗೆ ನೀಡಿ|
ಆನಂದ ಆನಂದವೆಂಬೊ ತೇಗು ಬಂದ ಪರಿಯಲಿ
ಆನಂದಮೂರುತಿ ನಮ್ಮ ಪುರಂದರವಿಠಲ ನೆನೆಯಿರೊ||