ಮನೆ ದೇವರ ನಾಮ ಎಂಥ ಅಂದ ಎಂಥ ಚಂದ ಶಾರದಮ್ಮ ನೀನು

ಎಂಥ ಅಂದ ಎಂಥ ಚಂದ ಶಾರದಮ್ಮ ನೀನು

0

ಎಂಥ ಅಂದ ಎಂಥ ಚಂದ ಶಾರದಮ್ಮ ನೀನು

ಎಂಥ ಅಂದ ಎಂಥ ಚಂದ ಶಾರದಮ್ಮ ನಿನ್ನ

ನೋಡಲೆರಡು ಕಣ್ಣು ನನಗೆ ಸಾಲದಮ್ಮ ||

ಎಂಥ ಅಂದ ಎಂಥ ಚಂದ ಶಾರದಮ್ಮ ನಿನ್ನ

ನೋಡಲೆರಡು ಕಣ್ಣು ನನಗೆ ಸಾಲದಮ್ಮ ||

ಇನ್ನು ಇನ್ನು ನೋಡುವಾಸೆ ತುಂಬಿತಮ್ಮ

ಇನ್ನು ಕೋಟಿ ಜನುಮ ಬರಲಿ ನನಗೆ ಸಾಲದಮ್ಮ||ಇನ್ನು||

ಅಭಯ ಹಸ್ತ ನೋಡಿ ಜೀವ ಕುಣಿಯಿತಮ್ಮ

ಅಭಯ ಹಸ್ತ ನೋಡಿ ಜೀವ ಕುಣಿಯಿತಮ್ಮ

ನಿನ್ನ ಪಾದಕಮಲದಲ್ಲಿ ಶಿರವು ಬಾಗಿತಮ್ಮ

ನಿನ್ನ ಪಾದಕಮಲದಲ್ಲಿ ಶಿರವು ಬಾಗಿತಮ್ಮ ||

ಎಂಥ ಶಕ್ತಿ ನಿನ್ನಲಿದೆಯೋ ಶಾರದಮ್ಮ

ನಿನ್ನ ನೋಡಿ ಹಾಡೋ ಆಸೆ ಬಂದಿತಮ್ಮ

ಎಂಥ ಶಕ್ತಿ ನಿನ್ನಲಿದೆಯೋ ಶಾರದಮ್ಮ ||

ನಿನ್ನ ನೋಡಿ ಹಾಡೋ ಆಸೆ ಬಂದಿತಮ್ಮ

ರತ್ನದಂಥ ಮಾತುಗಳನೆ ಆಡಿಸಮ್ಮ

ಒಳ್ಳೆ ರತ್ನದಂಥ ಮಾತುಗಳನೆ ಆಡಿಸಮ್ಮ ||

ರಾಗ ಭಾವ ಭಕ್ತಿ ತುಂಬಿ ಹಾಡಿಸಮ್ಮ

ಒಳ್ಳೆ ರಾಗ ಭಾವ ಭಕ್ತಿ ತುಂಬಿ ಹಾಡಿಸಮ್ಮ ||

ಅಲ್ಲಿ ಇಲ್ಲಿ ಓಡೋ ಮನಸು ನನ್ನದಮ್ಮಾ

ಬೇಗ ಬಂದು ನೆಲೆಸು ಅಲ್ಲಿ ಶಾರದಮ್ಮ || ಅಲ್ಲಿ ||

ಬೇರೆ ಏನು ಬೇಕು ಎಂದು ಕೇಳೇನಮ್ಮ ನಿನ್ನ

ಬೇರೆ ಏನು ಬೇಕು ಎಂದು ಕೇಳೆನಮ್ಮ ನಿನ್ನ

ವೀಣೆ ತಂತಿ ಮಾಡಿ ನುಡಿಸು ಶಾರದಮ್ಮ

ನನ್ನ ವೀಣೆ ತಂತಿ ಮಾಡಿ ನುಡಿಸು ಶಾರದಮ್ಮ ||ನನ್ನ ||

ಹಿಂದಿನ ಲೇಖನಒಳ್ಳೆಯ ಕೆಲಸಗಳು ವ್ಯಕ್ತಿಯನ್ನು ಉನ್ನತ ಮಟ್ಟಕ್ಕೆ ಕರೆದೊಯ್ಯುತ್ತವೆ: ಚಿತ್ರನಟ ಶ್ರೀನಾಥ್‌
ಮುಂದಿನ ಲೇಖನಹೆಚ್ಚುವರಿ ಕ್ಯಾಲೊರಿಗಳನ್ನು ಸುಡಲು ಈ ೪ ಯೋಗ ಬಹಳ ಪರಿಣಾಮಕಾರಿ