ರಾಗ : ಮಧ್ಯಮವತಿ. ಆದಿ ತಾಳ. ಪುರಂದರದಾಸರು
ರಾಮ ಮಂತ್ರವ ಜಪಿಸೋ ಹೇ ಮನುಜ|| ಪ ||
ಆ ಮಂತ್ರ ಈ ಮಂತ್ರ ನೆಚ್ಚಿ ನೀ ಕೆಡಬೇಡ
ಸೋಮಶೇಖರ ತನ್ನ ಸತಿಗೆ ಪೇಳಿದ ಮಂತ್ರ|| ಅ.ಪ ||
ಕುಲಹೀನನಾದರು ಕೂಗಿ ಜಪಿಸುವ ಮಂತ್ರ
ಸಲೆ ಬೀದಿ ಬೀದಿಯೊಳು ನುಡಿವ ಮಂತ್ರ |
ಹಲವು ಪಾಪಂಗಳ ಹತಗೊಳಿಸುವ ಮಂತ್ರ
ಸುಲಭದಿಂದಲಿ ಸ್ವರ್ಗ ಸೂರೆಗೊಂಬುವ ಮಂತ್ರ || ೧ ||
ಸ್ನಾನ ಮೌನಂಗಳಿಗೆ ಸಾಧನದ ಮಂತ್ರ
ಜ್ಞಾನಿಗಳು ಮನದಿ ಧ್ಯಾನಿಪ ಮಂತ್ರ |
ಹೀನ ಗುಣಂಗಳ ಹಿಂಗಿಸುವ ಮಂತ್ರ
ಏನೆಂಬೆ ವಿಭೀಷಣಗೆ ಪಟ್ಟಗಟ್ಟಿದ ಮಂತ್ರ || ೨ ||
ಸಕಲ ವೇದಂಗಳಿಗೆ ಸಾರವೆನಿಪ ಮಂತ್ರ
ಮುಕುತಿ ಮಾರ್ಗಕೆ ಇದೆ ಮೂಲ ಮಂತ್ರ |
ಭಕುತಿ ರಸಕೆ ಬಟ್ಟೆ ಒಮ್ಮೆ ತೋರುವ ಮಂತ್ರ