ಮನೆ ರಾಜಕೀಯ ಡಿಜಿಪಿ ಪ್ರವೀಣ್ ಸೂದ್ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ: ಡಿಕೆಶಿ ಆರೋಪ

ಡಿಜಿಪಿ ಪ್ರವೀಣ್ ಸೂದ್ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದಾರೆ: ಡಿಕೆಶಿ ಆರೋಪ

0

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಆಡಳಿತಾರೂಢ ಬಿಜೆಪಿ ಸರ್ಕಾರದ ಪರವಾಗಿ ಕೆಲಸ ಮಾಡುತ್ತಿದ್ದು, ಅವರನ್ನು ರಕ್ಷಣೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಸೂದ್ ನಮ್ಮ ಪಕ್ಷದ ನಾಯಕರ ವಿರುದ್ಧ ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಡಿಕೆಶಿ ದೂರಿದ್ದಾರೆ.

ಡಿಜಿಪಿ ನಾಲಾಯಕ್ (ನಿಷ್ಪ್ರಯೋಜಕ). ಕೂಡಲೇ ಅವರ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಶಿವಕುಮಾರ್ ಆರೋಪಿಸಿದ್ದಾರೆ.

ಪ್ರವೀಣ್ ಸೂದ್ ಡಿಜಿಪಿಯಾಗಿ ಮೂರು ವರ್ಷ ಸೇವೆ ಸಲ್ಲಿಸಿದ್ದಾರೆ. ಎಷ್ಟು ದಿನ ಅವರನ್ನೇ ಡಿಜಿಪಿ ಹುದ್ದೆಯಲ್ಲಿ ಇಟ್ಟುಕೊಂಡು ಪೂಜೆ ಮಾಡುತ್ತೀರಿ? ಕಾಂಗ್ರೆಸ್‌ ನವರ ಮೇಲೆ ಮಾತ್ರ ಪ್ರಕರಣ ದಾಖಲಿಸುತ್ತಿದ್ದಾರೆ. ನಮ್ಮ ಮೇಲೆ 25ಕ್ಕೂ ಹೆಚ್ಚು ಪ್ರಕರಣ ದಾಖಲಿಸಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಅವರ ವಿರುದ್ಧ ಕ್ರಮ ಜರುಗಿಸುವುದು ಖಚಿತ ಎಂದು ವಾಗ್ದಾಳಿ ನಡೆಸಿದ್ದಾರೆ.

ಕರ್ನಾಟಕದಲ್ಲಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲು 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ವಿಧಾನಸಭೆ ಚುನಾವಣೆಗೆ ಜೆಡಿಎಸ್ ಈಗಾಗಲೇ 93 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿಲ್ಲ.

ಹಿಂದಿನ ಲೇಖನನ್ಯಾಯಸಮ್ಮತ ಚುನಾವಣೆ ನಡೆಸಲು ಎಲ್ಲರ ಸಹಕಾರ ಮುಖ್ಯ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ
ಮುಂದಿನ ಲೇಖನದೆಹಲಿ ಅಬಕಾರಿ ನೀತಿ ಹಗರಣ: ಬಿಆರ್ ಎಸ್ ನಾಯಕಿ ಕವಿತಾ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ