ಮನೆ ಕಾನೂನು ಖಾಸಗಿ ನೌಕರರ ನಿವೃತ್ತಿಯ ವಯಸ್ಸು ಏರಿಕೆಗೆ ಧಾರವಾಡ ಹೈಕೋರ್ಟ್ ಒಪ್ಪಿಗೆ

ಖಾಸಗಿ ನೌಕರರ ನಿವೃತ್ತಿಯ ವಯಸ್ಸು ಏರಿಕೆಗೆ ಧಾರವಾಡ ಹೈಕೋರ್ಟ್ ಒಪ್ಪಿಗೆ

0

ಧಾರವಾಡ(Dharwad): ಖಾಸಗಿ ವಲಯದ ನೌಕರರ ನಿವೃತ್ತಿಯ ವಯಸ್ಸನ್ನು ೫೮ ವರ್ಷದಿಂದ ೬೦ ವರ್ಷಕ್ಕೆ ಏರಿಸಬೇಕು ಎಂಬ ಸರ್ಕಾರದ ಆದೇಶವನ್ನು ಧಾರವಾಡ ಹೈಕೋರ್ಟ್ ನ್ಯಾಯಪೀಠವು ಎತ್ತಿ ಹಿಡಿದಿದೆ.
ಕರ್ನಾಟಕ ಕೈಗಾರಿಕಾ ಉದ್ಯೋಗ ಸ್ಥಾಯಿ ಆದೇಶಗಳ ತಿದ್ದುಪಡಿ ನಿಯಮಗಳ ಮಾದರಿ ಅನ್ವಯ ನೌಕರರ ನಿವೃತ್ತಿ ವಯಸ್ಸು ಏರಿಸಿ, ಸರ್ಕಾರ ಆದೇಶಿಸಿತ್ತು. ರಾಜ್ಯ ಸರ್ಕಾರದ ಈ ಆದೇಶವನ್ನು ಹರಿಹರದ ಗ್ರಾಸಿಂ ಇಂಡಸ್ಟ್ರೀಸ್ ಕಂಪನಿ ಪ್ರಶ್ನಿಸಿ, ಹೈಕೋರ್ಟ್ ಮೊರೆ ಹೋಗಿತ್ತು.
ಕಂಪನಿ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠವು ೨೦೨೧, ಸೆಪ್ಟೆಂಬರ್ ೧೭ರಂದು ವಜಾಗೊಳಿಸಿತ್ತು. ಈ ವಜಾ ಆದೇಶವನ್ನು ಪ್ರಶ್ನಿಸಿ ಮತ್ತೆ ಮೇಲ್ಮನವಿ ಸಲ್ಲಿಸಲಾಗಿತ್ತು. ಈ ಸಂಬಂಧದ ಸುದೀರ್ಘ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಅಲ್ಲದೇ ೨೦೧೮ರ ಮಾರ್ಚ್ ೧೭ ಅಥವಾ ನಂತ್ರದಲ್ಲಿ ೫೯ ವರ್ಷಗಳನ್ನು ಪೂರೈಸಿ ನಿವೃತ್ತರಾದವರಿಗೆ ನಿವೃತ್ತಿ ದಿನಾಂಕ ಮತ್ತು ಅವರು ೬೦ ವರ್ಷ ತಲುಪಿದ ದಿನಾಂಕದ ನಡುವಿನ ಅವಧಿಗೆ ಶೇ.೫೦ರಷ್ಟು ವೇತನವನ್ನು ಮರುಪಾವತಿ ಮಾಡಬೇಕು ಎಂದು ಮೇಲ್ಮನವಿದಾರರಿಗೆ ಸೂಚಿಸಿದೆ.

ಹಿಂದಿನ ಲೇಖನಮಳೆಯ ಅಬ್ಬರ ತೀವ್ರಗೊಂಡಿದ್ದರೂ, ಕೇಂದ್ರದ ನೆರವು ಕೇಳಲು ಮೀನಾಮೇಷ ಎಣಿಸುತ್ತಿರುವುದೇಕೆ ?: ಸರ್ಕಾರಕ್ಕೆ ಕಾಂಗ್ರೆಸ್ ತರಾಟೆ
ಮುಂದಿನ ಲೇಖನವಿಜಯ್ ಮಲ್ಯಗೆ 4 ತಿಂಗಳ ಜೈಲು ಶಿಕ್ಷೆ ವಿಧಿಸಿ ಸುಪ್ರೀಂಕೋರ್ಟ್ ಆದೇಶ