ಮನೆ ಅಪರಾಧ ಧಾರವಾಡ: ಮನೆಯೊಂದರಲ್ಲಿ ಭಾರಿ ಪ್ರಮಾಣದ ನಗದು ಪತ್ತೆ

ಧಾರವಾಡ: ಮನೆಯೊಂದರಲ್ಲಿ ಭಾರಿ ಪ್ರಮಾಣದ ನಗದು ಪತ್ತೆ

0

ಧಾರವಾಡ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕ್ಷಿಪ್ರ ಕಾರ್ಯಪಡೆ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆಯೊಂದರಲ್ಲಿ ಕೋಟಿ ಕೋಟಿ ಮೊತ್ತದ ಭಾರಿ ಪ್ರಮಾಣದ ನಗದು ಪತ್ತೆಯಾಗಿದೆ.

Join Our Whatsapp Group

ಧಾರವಾಡದ ಅರ್ನಾ ರೆಸಿಡೆನ್ಸಿ ಅಪಾರ್ಟ್​ ಮೆಂಟ್​​ ನಲ್ಲಿರುವ ಬಸವರಾಜ ಎಂಬುವರ ಮನೆ ಮೇಲೆ ಅಧಿಕಾರಿಗಳ ದಾಳಿ ನಡೆದಿತ್ತು. ಮನೆಯಲ್ಲಿ ಮದ್ಯ ಸಂಗ್ರಹ ಮಾಡಲಾಗಿದೆ ಎಂಬ ಮಾಹಿತಿ ಮೇರೆಗೆ ಚುನಾವಣಾ ಕ್ಷಿಪ್ರ ಕಾರ್ಯಪಡೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಮದ್ಯ ಹುಡುಕಾಡುವಾಗ ವೇಳೆ ತಿಜೋರಿಯಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ವಿಷಯ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ತನಿಖೆ ಕೈಗೊಂಡಿದ್ದಾರೆ. ಪ್ರಕರಣವನ್ನು ಪೊಲೀಸರು ಆದಾಯ ತೆರಿಗೆ ಇಲಾಖೆಗೆ ವರ್ಗಾಯಿಸಿದ್ದು, ತನಿಖೆ ಮುಂದುವರೆದಿದೆ.