ಮನೆ ಅಪರಾಧ ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

ಧಾರವಾಡ: ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರ ಬರ್ಬರ ಹತ್ಯೆ

0

ಧಾರವಾಡ : ರಿಯಲ್ ಎಸ್ಟೇಟ್ ಉದ್ಯಮಿ ಸೇರಿ ಇಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಕಮಲಾಪೂರದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

Join Our Whatsapp Group

ಮಹ್ಮದ್ ಕುಡಚಿ ಹತ್ಯೆಯಾದ ಉದ್ಯಮಿ.

ಮಹ್ಮದ್ ಮನೆ ಎದುರು ಕುಳಿತಾಗ ದುಷ್ಕರ್ಮಿಗಳ ಗುಂಪು ಅವರ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದೆ.

ಕುಡಚಿ ಅವರ ಮನೆಯಿಂದ ಅನತಿ ದೂರದಲ್ಲಿ ಮತ್ತೊಂದು ಶವ ಪತ್ತೆಯಾಗಿದೆ. ಆ ಶವ ಕೂಡ ರಕ್ತಸಿಕ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕುಡಚಿ ಅವರ ಮನೆಯಿಂದಲೇ ಆ ವ್ಯಕ್ತಿ ಕೂಡ ಓಡಿ ಹೋಗಿದ್ದಾನೆ.

ರಸ್ತೆಯುದ್ದಕ್ಕೂ ರಕ್ತ ಚೆಲ್ಲಾಡಿದೆ. ದುಷ್ಕರ್ಮಿಗಳು ಆತನನ್ನೂ ಅಟ್ಟಾಡಿಸಿಕೊಂಡು ಹತ್ಯೆ ಮಾಡಿದ್ದಾರೆ. ಆತನ ಹೆಸರು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಸೇರಿದಂತೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿದ್ದಾರೆ.

ಹಿಂದಿನ ಲೇಖನFDA & ಟ್ಯಾಕ್ಸ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನಬ್ಯಾಂಕ್‌ ಖಾತೆ ಬ್ಲಾಕ್‌ ಸಂದೇಶ ನಂಬಿ 3.10 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ