ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ನಿಂದ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 32 ಹುದ್ದೆಗಳ ನೇಮಕಾತಿ ನಡೆಯಲಿದ್ದು, ಪಿಯುಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆ ವಿವರ: ಜಿಲ್ಲೆಯ ಧಾರವಾಡ ತಾಲೂಕಿನಲ್ಲಿ 7, ಹುಬ್ಬಳ್ಳಿ ತಾಲೂಕಿನಲ್ಲಿ 7, ಕುಂದಗೋಳ ತಾಲೂಕಿನಲ್ಲಿ 6, ನವಲಗುಂದ ತಾಲೂಕಿನಲ್ಲಿ 6, ಕಲಘಟಗಿ ತಾಲೂಕಿನಲ್ಲಿ 2, ಆಳ್ನಾವರ ತಾಲೂಕಿನಲ್ಲಿ 2, ಅಣ್ಣಿಗೇರಿ ತಾಲೂಕಿನಲ್ಲಿ 2 ಹುದ್ದೆಗಳ ಭರ್ತಿ ನಡೆಸಲಾಗುವುದು.
ವಿದ್ಯಾರ್ಹತೆ: ಪಿಯುಸಿ, ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪ್ರಮಾಣಪತ್ರ ಪಡೆದಿರಬೇಕು. ಕನಿಷ್ಠ 3 ತಿಂಗಳ ಕಂಪ್ಯೂಟರ್ ಕೋರ್ಸ್ ಉತ್ತೀರ್ಣರಾಗಿರಬೇಕು. ಸರ್ಟಿಫಿಕೇಷನ್ ಕೋರ್ಸ್ ಇನ್ ಲೈಬ್ರರಿ ಸೈನ್ಸ್ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸದೇ ಇದ್ದಲ್ಲಿ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ಹುದ್ದೆಗೆ ಪರಿಗಣಿಸಲಾಗುತ್ತದೆ.
ವಿಶೇಷ ಸೂಚನೆ: ಅಭ್ಯರ್ಥಿಗಳು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಿವಾಸಿಗಳಾಗಿರಬೇಕು.
ವಯೋಮಿತಿ: ಕನಿಷ್ಠ 18, ಗರಿಷ್ಠ 35 ವರ್ಷಗಳ ವಯೋಮಿತಿ ಮೀರಿರಬಾರದು. ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬೇಕು. ಸಾಮಾನ್ಯ ಅಭ್ಯರ್ಥಿಗಳಿಗೆ 500 ರೂಪಾಯಿ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 300 ರೂ, ಪ.ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ಮಾಜಿ ಸೈನಿಕರಿಗೆ 200 ರೂ. ಹಾಗೂ ವಿಶೇಷ ಚೇತನ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ ವಿಧಿಸಲಾಗಿದೆ.
ಈ ಹುದ್ದೆಗೆ ಮೆರಿಟ್ ಮೇಲೆ ಅಭ್ಯರ್ಥಿಗಳ ಆಯ್ಕೆ ನಡೆಯಲಿದ್ದು, ನವೆಂಬರ್ 5ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನ ಡಿಸೆಂಬರ್ 4 ಆಗಿದೆ.
ಈ ಹುದ್ದೆ ಕುರಿತ ಮತ್ತಷ್ಟು ಮಾಹಿತಿ ಮತ್ತು ಅಧಿಕೃತ ಅಧಸೂಚನೆಗೆ ಅಭ್ಯರ್ಥಿಗಳು zpdharwad.karnataka.gov.in ಇಲ್ಲಿಗೆ ಭೇಟಿ ನೀಡಿ.