ಮನೆ ಕಾನೂನು ಡಿಜಿಟಲ್ ಅರೆಸ್ಟ್ ಪ್ರಕರಣ: ಮಂಗಳೂರಲ್ಲಿ 68 ಲಕ್ಷ ವಂಚಿಸಿದ ಆರೋಪಿ ಬಂಧನ

ಡಿಜಿಟಲ್ ಅರೆಸ್ಟ್ ಪ್ರಕರಣ: ಮಂಗಳೂರಲ್ಲಿ 68 ಲಕ್ಷ ವಂಚಿಸಿದ ಆರೋಪಿ ಬಂಧನ

0

ಮಂಗಳೂರು: ಸಿಬಿಐ ಅಧಿಕಾರಿ ಎಂದು ಫೋನ್ ಮಾಡಿ ಬೆದರಿಸಿದ್ದಲ್ಲದೇ, ಡಿಜಿಟಲ್ ಅರೆಸ್ಟ್ ಮೂಲಕ ಲಕ್ಷಾಂತರ ಹಣ ವಂಚಿಸಿದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಕೇರಳದ ಎರ್ನಾಕುಲಂ ಜಿಲ್ಲೆಯ ಆಲುವಾ ತಾಲೂಕಿನ ನಿಸಾರ್ ಬಂಧಿತ ಆರೋಪಿ.

ತಾನು ಸಿಬಿಐ ಅಧಿಕಾರಿ ಎಂದು ಕರೆ ಮಾಡಿ ಹೆದರಿಸಿದ್ದ ವ್ಯಕ್ತಿ ಬಳಿಕ ಡಿಜಿಟಲ್ ಅರೆಸ್ಟ್ ಮಾಡಿ ಸುಮಾರು 68 ಲಕ್ಷದಷ್ಟು ಹಣವನ್ನು ಸುಲಿಗೆ ಮಾಡಿದ್ದರು. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಕೇರಳದ ಎರ್ನಾಕುಲಂ ಜಿಲ್ಲೆಯಲ್ಲಿ ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.