ಡಾಲಿ ಧನಂಜಯ್ ಅಭಿನಯದ 2022ರ ಹೆಡ್ ಬುಷ್ ಚಿತ್ರಕ್ಕೆ ಹೆಸರುವಾಸಿಯಾದ ನಿರ್ದೇಶಕ ಶೂನ್ಯ ಇದೀಗ ನಟನೆಯತ್ತ ಹೊರಳಿದ್ದಾರೆ. ‘ಲಾರ್ಡ್ ಗಾಗಾ’ ಎನ್ನುವ ಶೀರ್ಷಿಕೆಯ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಹಿಂದೆ ‘ಗಿಲ್ಕಿ’ ಚಿತ್ರ ನಿರ್ದೇಶಿದ್ದ ವೈಕೆ ‘ಲಾರ್ಡ್ ಗಾಗಾ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ.
ಇದೊಂದು ಆ್ಯಕ್ಷನ್-ಪ್ಯಾಕ್ಡ್ ಅಡ್ವೆಂಚರ್ ಚಿತ್ರವಾಗಿ ರೂಪುಗೊಂಡಿದ್ದು, ಶೂನ್ಯ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ತಮ್ಮ ಆಪ್ತ ಸ್ನೇಹಿತ ಮುಕಿ ಅವರ ಜೊತೆಗೂಡಿ ತಮ್ಮದೇ ಆದ ಝೀರೋ ಗ್ರಾವಿಟಿ ಫಿಲ್ಮ್ಸ್ ನಿರ್ಮಾಣ ಸಂಸ್ಥೆಯಡಿ ಶೂನ್ಯ ಅವರೇ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಚಿತ್ರಕ್ಕೆ ಹೇಮಂತ್ ಕುಮಾರ್ ಸಂಗೀತ ಸಂಯೋಜಿಸಲಿದ್ದು, ಜೀವನ್ ಛಾಯಾಗ್ರಹಣವನ್ನು ನಿರ್ವಹಿಸಲಿದ್ದಾರೆ. ಈ ತಿಂಗಳ ಅಂತ್ಯದ ವೇಳೆಗೆ ಚಿತ್ರೀಕರಣ ಪ್ರಾರಂಭವಾಗಲಿದ್ದು, ಉಡುಪಿ ಮತ್ತು ಮಂಗಳೂರಿನ ರಮಣೀಯ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ. ಇನ್ನೊಂದೆಡೆ ನಿರ್ದೇಶಕ ಶೂನ್ಯ ನಟ ಯೋಗಿ ಜೊತೆ ರೋಸಿ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.