ಮನೆ ರಾಜ್ಯ ರಾಜ್ಯದ ಮೂರು ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವುದು ನಿರಾಸೆ ತಂದಿದೆ : ಬಿ ವೈ ವಿಜಯೇಂದ್ರ

ರಾಜ್ಯದ ಮೂರು ಕ್ಷೇತ್ರದಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವುದು ನಿರಾಸೆ ತಂದಿದೆ : ಬಿ ವೈ ವಿಜಯೇಂದ್ರ

0

ಬೆಂಗಳೂರು : ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ನಮಗೆ ಹಿನ್ನಡೆಯಾಗಿದೆ. ಚನ್ನಪಟ್ಟಣದಲ್ಲಿ ಮಿತ್ರಪಕ್ಷ ಜೆಡಿಎಸ್ ಹಾಗೂ ಸಂಡೂರು ಹಾಗೂ ಶಿಗ್ಗಾಂವಿಯಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸವಿತ್ತು. ಆದರೆ, ನಿರಾಸೆ ಆಗಿರುವುದು ಸತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.

Join Our Whatsapp Group

ಉಪಚುನಾವಣೆ ಫಲಿತಾಂಶದ ನಂತರ ಇಂದು ನಗರದಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಅವರು, ಸೋಲಿಗೆ ಕಾರಣಗಳ ಬಗ್ಗೆ ಎರಡೂ ಪಕ್ಷದ ಮುಖಂಡರು ಕುಳಿತು ಚರ್ಚೆ ಮಾಡುತ್ತೇವೆ. ಸೋಲಿಗೆ ಕಾರಣ ಹುಡುಕುತ್ತೇವೆ ಎಂದರು.

ಸಂಡೂರಿನಲ್ಲಿ ಮೊದಲ ಬಾರಿಗೆ ಬಿಜೆಪಿ ಸುಮಾರು 80 ಸಾವಿರ ಮತ ಪಡೆದಿದೆ. ಎಂಟತ್ತು ಸಾವಿರ ಅಂತರದಲ್ಲಿ ಗೆಲ್ಲುವ ವಿಶ್ವಾಸವಿತ್ತು. ಸಂಡೂರು ಫಲಿತಾಂಶ ಹಿನ್ನಡೆ ಅಂತ ನಾನು ಭಾವಿಸುವುದಿಲ್ಲ. ಹಿನ್ನೆಡೆಗೆ ಕಾರಣ ಹುಡುಕಿ ಸರಿಪಡಿಸಿಕೊಳ್ಳುತ್ತೇವೆ. ಆದರೆ, ಶಿಗ್ಗಾಂವಿ ಕ್ಷೇತ್ರ ಮಾತ್ರ ನಮಗೆ ಆಘಾತ ತಂದಿದೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೆಲಸ ಮಾಡಿದ್ದರು. ಅಭಿವೃದ್ಧಿ ಕೆಲಸಗಳನ್ನೂ ಮಾಡಿದ್ದರು. ಸೋಲಿನ ಬಗ್ಗೆ ಕಾರಣ ಹುಡುಕುತ್ತೇವೆ ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಎನ್​ಡಿಎ ನಮ್ಮ ನಿರೀಕ್ಷೆಗೂ ಮೀರಿ 200ರ ಗಡಿ ದಾಟಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಮಿತ್ರ ಪಕ್ಷಗಳು ದಾಖಲೆ ಮಾಡಿದೆ. ಮಹಾರಾಷ್ಟ್ರ ಜನತೆ ಮತ್ತೊಮ್ಮೆ ಮೋದಿ ನಾಯಕತ್ವದ ಮೇಲೆ ವಿಶ್ವಾಸ ಇಟ್ಟಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು.