ಮೈಸೂರು(Mysuru): ಪತ್ರಿಕೋದ್ಯಮ ಕ್ಷೇತ್ರಕ್ಕೆ ಬರುವ ಯುವ ಜನತೆ ಬದ್ಧತೆ, ಶಿಸ್ತು ಮತ್ತು ಪ್ರಾಮಾಣಿಕತೆಯನ್ನು ರೂಢಿಸಿಕೊಳ್ಳುವುದು ಅವಶ್ಯ ಎಂದು ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ತಿಳಿಸಿದರು.
ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಂವಹನ ವಿಭಾಗದಿಂದ ಪ್ರತಿ ವಾರ ಬಿಡುಗಡೆಯಾಗುವ ‘ಮಾನಸಗಂಗೋತ್ರಿ’ ಎಂಬ ವಿದ್ಯಾರ್ಥಿ ಪ್ರಾಯೋಗಿಕ ಪತ್ರಿಕೆಯನ್ನು ಬಿಡುಗಡೆ ಮಾಡಿ ಅವರು ಮಾತನಾಡಿದರು.
ಪತ್ರಕರ್ತರು ನಿಷ್ಠೆಯಿಂದ ಕಾರ್ಯನಿರ್ವಹಿಸಿದರೆ ಎಂತಹ ಅಡೆತಡೆಗಳನ್ನೂ ಎದುರಿಸಬಹುದು ಎಂದು ಕಿವಿಮಾತು ಹೇಳಿದರು.
ಪತ್ರಿಕೋದ್ಯಮ ವಿಭಾಗ ಕರ್ನಾಟಕದಲ್ಲಿ ಮೊದಲು ಪ್ರಾರಂಭವಾಗಿದ್ದು ಮೈಸೂರು ವಿಶ್ವವಿದ್ಯಾಲಯದಲ್ಲಿ. ಈ ನಿಟ್ಟಿನಲ್ಲಿ, ಪತ್ರಿಕೋದ್ಯಮ ಕ್ಷೇತ್ರಕ್ಕೆ ಮೈಸೂರು ವಿಶ್ವವಿದ್ಯಾಲಯದ ಕೊಡುಗೆ ಅಪಾರವಾಗಿದೆ ಎಂದರು.
ವಿಭಾಗದ ಮುಖ್ಯಸ್ಥ ಪ್ರೊ.ಸಿ.ಕೆ.ಪುಟ್ಟಸ್ವಾಮಿ, ಪ್ರೊ.ಎಂ.ಎಸ್.ಸಪ್ನಾ, ಅತಿಥಿ ಉಪನ್ಯಾಸಕರಾದ ಡಾ.ಕೆ.ಎಸ್.ಕುಮಾರಸ್ವಾಮಿ, ಡಾ.ಗೌತಮ್ ದೇವನೂರು ಇದ್ದರು.
Saval TV on YouTube