ಮನೆ ರಾಜಕೀಯ ಮಂಡ್ಯದಲ್ಲಿ ಬಿಜೆಪಿ ಪಕ್ಷದ ಸಮಾವೇಶ ನಡೆಸುವ ಬಗ್ಗೆ ಚರ್ಚಿಸಿ ತೀರ್ಮಾನ: ಸಿಎಂ ಬೊಮ್ಮಾಯಿ

ಮಂಡ್ಯದಲ್ಲಿ ಬಿಜೆಪಿ ಪಕ್ಷದ ಸಮಾವೇಶ ನಡೆಸುವ ಬಗ್ಗೆ ಚರ್ಚಿಸಿ ತೀರ್ಮಾನ: ಸಿಎಂ ಬೊಮ್ಮಾಯಿ

0

ಬೆಂಗಳೂರು (Bengaluru)-ಮಂಡ್ಯದಲ್ಲಿ ಬಿಜೆಪಿ ಪಕ್ಷದ ಸಮಾವೇಶ ನಡೆಸುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basvaraj Bommai) ಹೇಳಿದರು.
ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ಸೌಹಾರ್ದಯುತವಾಗಿ ಭೇಟಿಯಾಗಿ ಹುಟ್ಟುಹಬ್ಬಕ್ಕೆ ಶುಭಕೋರಿ ಕೆಲಕಾಲ ಅವರೊಂದಿಗೆ ಮಾತುಕತೆ ನಡೆಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಭಾಗದಿಂದಲೂ ಬಹಳ ಜನ ಬಿಜೆಪಿಗೆ ಬರುತ್ತಿದ್ದಾರೆ. ವಿಶೇಷವಾಗಿ ಕೋಲಾರ, ಮಂಡ್ಯದಿಂದ ಹೆಚ್ಚು ಜನ ಬರುತ್ತಿದ್ದಾರೆ. ಬ್ಯಾಚ್ ವಾರು ಸೇರ್ಪಡೆ ಮಾಡುವ ಕೆಲಸವಾಗುತ್ತಿದೆ. ಬಹಳ ದೊಡ್ಡ ಪ್ರಮಾಣದಲ್ಲಿ ದಕ್ಷಿಣ ಕರ್ನಾಟಕದಲ್ಲಿ ಸಾರ್ವಜನಿಕರು ಹಾಗೂ ವಿಶೇಷವಾಗಿ ಯುವಕರು ಪಕ್ಷಕ್ಕೆ ಬರಲು ಒಲವು ತೋರುತ್ತಿದ್ದಾರೆ. ಹೀಗಾಗಿ ಮಂಡ್ಯ ಜಿಲ್ಲೆಯಲ್ಲಿ ಹೊಸ ಯುವ ನಾಯಕತ್ವ ಹೊರಹೊಮ್ಮುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಬಿಜೆಪಿಯ ಪರವಾಗಿ ಮಂಡ್ಯದಲ್ಲಿ ಬಹಳ ದೊಡ್ಡ ಶಕ್ತಿಯ ಅಲೆ ಕಾಣುತ್ತಿದೆ ಎಂದು ಹೇಳಿದರು.
ಎಸ್.ಟಿ. ಜಯರಾಂ ಮಾತ್ರ ಅಲ್ಲದೆ ಯಾರು ನಮ್ಮ ಪಕ್ಷದ ಬಗ್ಗೆ ಹಾಗೂ ಪಕ್ಷದ ವಿಚಾರಗಳ ಬಗ್ಗೆ ಒಲವು ತೋರಿಸಿದ್ದಾರೆಯೋ ಅವರೆಲ್ಲ ಬಳಿ ಮಾತನಾಡಲಾಗುವುದು ಎಂದರು.

ಹಿಂದಿನ ಲೇಖನನೆಲ-ಜಲ ವಿಚಾರದಲ್ಲಿ ಗಟ್ಟಿ ನಿಲುವು ತಳೆದಿದ್ದ ಅನಂತಕುಮಾರ್: ಸಿಎಂ ಬೊಮ್ಮಾಯಿ
ಮುಂದಿನ ಲೇಖನತಮ್ಮ ಜನ್ಮದಿನ ಆಚರಿಸದಂತೆ ಡಿ.ಕೆ. ಶಿವಕುಮಾರ್ ಮನವಿ