ಮನೆ ರಾಜಕೀಯ ಎಸಿಬಿ ರದ್ದುಗೊಳಿಸಿ ಹೈಕೋರ್ಟ್ ಆದೇಶ ಕುರಿತು ಚರ್ಚಿಸಿ ಮುಂದಿನ ತೀರ್ಮಾನ: ಸಿಎಂ ಬೊಮ್ಮಾಯಿ

ಎಸಿಬಿ ರದ್ದುಗೊಳಿಸಿ ಹೈಕೋರ್ಟ್ ಆದೇಶ ಕುರಿತು ಚರ್ಚಿಸಿ ಮುಂದಿನ ತೀರ್ಮಾನ: ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಎಸಿಬಿ ರದ್ದುಗೊಳಿಸಿ ಹೈಕೋರ್ಟ್ ಆದೇಶ ನೀಡಿದ್ದು, ಈ ಕುರಿತು ಚರ್ಚಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ವಿಧಾನಸೌಧದಲ್ಲಿ ಶುಕ್ರವಾರ ಮಾತನಾಡಿದ ಅವರು, ನಮ್ಮ ಪಕ್ಷದ ಪ್ರಣಾಳಿಕೆ ಗಮನದಲ್ಲಿಟ್ಟುಕೊಂಡು, ಹೈಕೋರ್ಟ್ ಆದೇಶ ಕೊಟ್ಟಿರುವುದನ್ನು ಗಮನಿಸಿದೆ. ನಮ್ಮ ಪಕ್ಷದ ಪ್ರಣಾಳಿಕೆ ಮೂಲ ಪ್ರತಿ ತೆಗೆದುಕೊಂಡು ಚರ್ಚೆ ಮಾಡ್ತೀವಿ. ಮುಂದೆ ಏನೆಲ್ಲಾ ಮಾಡಬಹುದು ತೀರ್ಮಾನ ಮಾಡುತ್ತೇವೆ ಎಂದರು.

ಶಿವಮೊಗ್ಗ ಸುಬ್ಬಣ್ಣಗೆ ಸಂತಾಪ : ಇದೇ ಸಂದರ್ಭದಲ್ಲಿ  ಶಿವಮೊಗ್ಗ ಸುಬ್ಬಣ್ಣ ನಮ್ಮನ್ನು ಅಗಲಿರೋದು ಬಹಳ ದುಃಖಕರ ಸಂಗತಿ ಎಂದು ಸಿಎಂ ಸಂತಾಪ ಸೂಚಿಸಿದರು.

ಅವರು ಸಾಹಿತ್ಯ, ಸಂಗೀತ, ಹಾಡುಗಾರಿಕೆ ಎಲ್ಲದರಲ್ಲೂ ಮುಂಚೂಣಿಯಲ್ಲಿದ್ದರು. ಹಲವು ಪ್ರಶಸ್ತಿಗೆ ಭಾಜನರಾದವರು. ಕರ್ನಾಟಕದ ಮನೆ ಮನೆಗೆ ಅವರ ಹಾಡು ಮುಟ್ಟಿತ್ತು. ಕನ್ನಡದ ಮಹಾನ್ ಕಲಾವಿದರನ್ನು ಕಳೆದುಕೊಂಡು ಬಡವಾಗಿದೆ. ಮೃತದೇಹವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ ಎಂದು ಹೇಳಿದರು.