ಮನೆ ರಾಜಕೀಯ ಬಿಜೆಪಿ ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ ನೀಡುವ‌ ಕುರಿತು ಚರ್ಚೆ: ಬೊಮ್ಮಾಯಿ

ಬಿಜೆಪಿ ಶಾಸಕರಿಗೆ ಲೋಕಸಭೆ ಚುನಾವಣೆಯ ಗುರಿ ನೀಡುವ‌ ಕುರಿತು ಚರ್ಚೆ: ಬೊಮ್ಮಾಯಿ

0

ಬೆಂಗಳೂರು: ಲೋಕಸಭೆ ಚುನಾವಣೆಗೆ ಶಾಸಕರಿಗೆ ಗುರಿ ನೀಡುವ ಕುರಿತು ಸಭೆಯಲ್ಲಿ ಚರ್ಚೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

Join Our Whatsapp Group

ಬಿಜೆಪಿ ಕಚೇರಿಯಲ್ಲಿ ನಡೆದ ನೂತನ ಶಾಸಕರ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನೂತನ ಶಾಸಕರಿಗೆ ಅಭಿನಂದನೆ ಸಲ್ಲಿಸಲಾಗಿದೆ. ವಿಧಾನಾಸಭೆ ಚುನಾವಣಾ ಸಂದರ್ಭದಲ್ಲಿ ಏನೆಲ್ಲಾ ಮಾಡಬಹುದಿತ್ತು ಅನ್ನುವ ಬಗ್ಗೆಯೂ ಚರ್ಚೆಯಾಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರ 9 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಯೋಜನೆ ಜನರಿಗೆ ತಲುಪಿಸಲು ಮುಂದೆ ಏನೆಲ್ಲಾ ಮಾಬೇಕು ಎನ್ನುವ ಕುರಿತಂತೆ ಚರ್ಚೆ ಮಾಡಲಾಗಿದೆ ಎಂದರು.

ಇದೇ ವೇಳೆ ವಿಧಾನಸಭೆ ಪ್ರತಿಪಕ್ಷದ ನಾಯಕನ ಆಯ್ಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ವಿಪಕ್ಷ ನಾಯಕರ ಆಯ್ಕೆ ಕುರಿತು ಈ ಸಭೆಯಲ್ಲಿ ಚರ್ಚೆಗೆ ಬಂದಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ಶಾಸಕರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ ಎಂದರು.

ಕೋರ್ ಕಮಿಟಿ ಸಭೆಯನ್ನು ಪಕ್ಷದ ರಾಜ್ಯಾಧ್ಯಕ್ಷರು ಕರೆಯುತ್ತಾರೆ ಎಂದು ಹೇಳಿದರು.

ಹಿಂದಿನ ಲೇಖನನರೇಶ್-ಪವಿತ್ರಾ ನಟನೆಯ ‘ಮಳ್ಳಿ ಪೆಳ್ಳಿ’  ಸಿನಿಮಾ  ನಿಜ ಜೀವನದ ಕತೆಯಾ?
ಮುಂದಿನ ಲೇಖನಪಿಎಸ್ ಜಿ ತೊರೆದು ಅಮೆರಿಕದ ಕ್ಲಬ್ ಸೇರಲಿರುವ ಫುಟ್ಬಾಲ್‌ ದಿಗ್ಗಜ ಲಿಯೋನೆಲ್‌ ಮೆಸ್ಸಿ