ಮನೆ ರಾಜಕೀಯ ಕೆ.ಎಸ್.ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ: ಹೆಚ್.ಸಿ ಮಹದೇವಪ್ಪ

ಕೆ.ಎಸ್.ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ: ಹೆಚ್.ಸಿ ಮಹದೇವಪ್ಪ

0

ಮೈಸೂರು:  ಕೆಂಪುಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂಬ ಹೇಳಿಕೆ ನೀಡಿದ ಸಚಿವ ಕೆ.ಎಸ್ ಈಶ್ವರಪ್ಪ ಅವರನ್ನ ಸಚಿವ ಸಂಪುಟದಿಂಧ ವಜಾಗೊಳಿಸಬೇಕು ಎಂದು ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಹೆಚ್.ಸಿ ಮಹದೇವಪ್ಪ,  ಸಚಿವ ಈಶ್ವರಪ್ಪ ಹೇಳಿಕೆ ರಾಷ್ಟ್ರದ್ರೋಹಿಯಂತಹ ಕೃತ್ಯ.  ಈಶ್ವರಪ್ಪ  ಹಿರಿಯ ನಾಯಕರಾಗಿ ಈ ರೀತಿ ಹೇಳಿಕೆ ನೀಡಿದ್ದು ತಪ್ಪು. ಅವರನ್ನ ಸಂಪುಟದಿಂದ ಕೈ ಬಿಡಬೇಕು. ರಾಜ್ಯಪಾಲರು ಈಶ್ವರಪ್ಪರನ್ನ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಹಿಜಾಬ್ –ಕೇಸರಿ ಶಾಲು ವಿವಾದ ತಾರಕಕ್ಕೇರಿದ ವೇಳೆಯಲ್ಲಿ ಸಚಿವ ಕೆ.ಎಸ್ ಈಶ್ವರಪ್ಪ ಕೆಂಪು ಕೋಟೆಯಲ್ಲಿ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು.

ಹಿಂದಿನ ಲೇಖನನೀಟ್ ವಿಳಂಬ; ಕೋರ್ಸ್ ಬಿಟ್ಟ ವಿದ್ಯಾರ್ಥಿಗಳಿಗೆ ಶುಲ್ಕ ವಾಪಸ್: ಡಾ.ಅಶ್ವತ್ಥನಾರಾಯಣ
ಮುಂದಿನ ಲೇಖನಹಿಜಾಬ್ ವಿವಾದ: ಹೈಕೋರ್ಟ್ ನ ಮಧ್ಯಂತರ ಆದೇಶ ಪ್ರಕಟ