ಮಂಡ್ಯ(Mandya): ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಇತ್ತ ಮಂಡ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ನೇಮಕವಾಗಿರುವ ಆರ್ ಅಶೋಕ್ ಅವರಿಗೆ ವಿರೋಧ ವ್ಯಕ್ತವಾಗುತ್ತಿದೆ.
ಮಂಡ್ಯ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ಗೋಪಾಲಯ್ಯರನ್ನು ದಿಢೀರ್ ಬದಲಾವಣೆ ಮಾಡಿ ಸಚಿವ ಅಶೋಕ್ ಆ ಜವಾಬ್ದಾರಿ ನೀಡಿದ್ದಕ್ಕೆ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದ ವಿವಿ ರಸ್ತೆ, ಸುಭಾಷ್ ರಸ್ತೆ ಗೋಡೆ ಮೇಲೆ ‘ಗೋ ಬ್ಯಾಕ್ ಆರ್.ಅಶೋಕ್’ ಮಂಡ್ಯ ಬಿಟ್ಟು ಹೋಗಿ ಅಶೋಕ್ ಎಂಬ ಭಿತ್ತಿಪತ್ರ ಅಂಟಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ.
ಇನ್ನು ಉಸ್ತುವಾರಿ ಸಚಿವರಾಗಿ ಆರ್.ಅಶೋಕ್ ನೇಮಿಸಿದ್ದಕ್ಕೆ ಆರ್.ಅಶೋಕ್ ವಿರುದ್ಧ ಪರೋಕ್ಷವಾಗಿ ಅಸಮಧಾನ ವ್ಯಕ್ತಪಡಿಸಿರುವ ಬಿಜೆಪಿ ಮುಖಂಡ ಸಿದ್ದರಾಮಯ್ಯ, ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಸದೃಢವಾಗಿದೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದರು. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಬೇಕಿರಲಿಲ್ಲ. ಅಶೋಕ್ ವಿರುದ್ಧ ಹೊಂದಾಣಿಕೆ ರಾಜಕಾರಣ ಮಾಡಿದ ಆರೋಪವಿದೆ. ಆದರೆ ಜಿಲ್ಲೆಯಲ್ಲಿ ಹೊಂದಾಣಿಕೆ ರಾಜಕೀಯ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.