ಮನೆ ರಾಷ್ಟ್ರೀಯ ನಕಲಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ: ದೆಹಲಿ, ಚಂಡೀಗಢ, ಸೇರಿದಂತೆ ಹಲವಡೆ ಇ.ಡಿ ದಾಳಿ

ನಕಲಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ: ದೆಹಲಿ, ಚಂಡೀಗಢ, ಸೇರಿದಂತೆ ಹಲವಡೆ ಇ.ಡಿ ದಾಳಿ

0

ನವದೆಹಲಿ: ಆಯುಷ್ಮಾನ್ ಭಾರತ್ ಯೋಜನೆಯ ನಿಯಮಗಳ ಉಲ್ಲಂಘನೆ ಮತ್ತು ನಕಲಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದೆಹಲಿ, ಚಂಡೀಗಢ, ಪಂಜಾಬ್‌, ಹಿಮಾಚಲ ಪ್ರದೇಶದ ಹಲವಡೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.

Join Our Whatsapp Group

ಹಿಮಾಚಲ ಪ್ರದೇಶದ ಕಾಂಗ್ರಾ, ಉನಾ, ಶಿಮ್ಲಾ, ಮಂಡಿ, ಕುಲು ಸೇರಿದಂತೆ ವಿವಿಧ ರಾಜ್ಯಗಳ 19 ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ.

ನಕಲಿ ಆಯುಷ್ಮಾನ್ ಭಾರತ್ ಕಾರ್ಡ್‌ಗಳನ್ನು ಆಧರಿಸಿ ಬ್ಯಾಂಕಿ ಬಿಹಾರಿ ಆಸ್ಪತ್ರೆ, ಫೋರ್ಟಿಸ್ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳಲ್ಲಿ ವೈದ್ಯಕೀಯ ಬಿಲ್‌ಗಳನ್ನು ಮಾಡಲಾಗಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ಮತ್ತು ಸಾರ್ವಜನಿಕರಿಗೆ ನಷ್ಟ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.