ಮನೆ ರಾಜ್ಯ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ

ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ

0

ಬೆಂಗಳೂರು: ಮಾನ್ಯ ಸರ್ವೋಚ್ಚ ನ್ಯಾಯಾಲಯವು ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ (ಬಿ.ಪಿ.ಎಲ್) ನೀಡಲು ಆದೇಶಿಸಿದ್ದು,  ಆದ್ಯತಾ ಪಡಿತರ ಚೀಟಿ ಹೊಂದಲು ಅರ್ಹ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ನೀಡುವ ಕಾರ್ಯ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾರಂಭವಾಗಿರುತ್ತದೆ.

Join Our Whatsapp Group

ಆದ್ದರಿಂದ ಆದ್ಯತಾ ಪಡಿತರ ಚೀಟಿ ಹೊಂದಿಲ್ಲದ ಇ-ಶ್ರಮ್ ನೋಂದಾಯಿತ ಎಲ್ಲಾ ಅರ್ಹ ಕಾರ್ಮಿಕರು ನಿಮ್ಮ ಹತ್ತಿರದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವುದು.

ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ದೂರವಾಣಿ ಸಂಖ್ಯೆ:1800-425-9339 ಅಥವಾ ಸಹಾಯವಾಣಿ 1967ಕ್ಕೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯವರೆವಿಗೂ ಸಂಪರ್ಕಿಸುವಂತೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.