ಮೈಸೂರು: ಜಿಲ್ಲಾ ಸಶಸ್ತ್ರ ಮೀಸಲು (ಡಿಎಆರ್) ಪಡೆಯ ಮೈದಾನದಲ್ಲಿ ಶುಕ್ರವಾರ ನಡೆದ ವಾರದ ಕವಾಯತಿನಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಮಲ್ಲಿಕಾರ್ಜುನ ಬಾಲದಂಡಿ ಅವರು ಗೌರವ ವಂದನೆ ಸ್ವೀಕರಿಸಿ ಕವಾಯತನ್ನು ಪರಿವೀಕ್ಷಣೆ ನಡೆಸಿದರು ಎನ್ನಲಾಗಿದೆ.

ಈದರ ಕುರಿತು ಕವಾಯತಿನ ವೇಳೆ ಪೊಲೀಸ್ ಸಿಬ್ಬಂದಿಯ ಶಿಸ್ತು, ಕಾರ್ಯಕ್ಷಮತೆ ಹಾಗೂ ಸನ್ನದ್ಧತೆಯನ್ನು ಪರಿಶೀಲಿಸಿದ ಎಸ್ಪಿ ಅವರು ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು. ವಾರದ ಕವಾಯತು ಪೊಲೀಸ್ ಸಿಬ್ಬಂದಿಯಲ್ಲಿ ದೈಹಿಕ ಸಾಮರ್ಥ್ಯ, ಶಿಸ್ತು ಮತ್ತು ಕರ್ತವ್ಯನಿಷ್ಠೆಯನ್ನು ಹೆಚ್ಚಿಸುವ ಉದ್ದೇಶದಿಂದ ನಿಯಮಿತವಾಗಿ ನಡೆಸಲಾಗುತ್ತದೆ.

ಹಾಗೂ ಈ ಸಂದರ್ಭದಲ್ಲಿ ಅಪರ ಪೊಲೀಸ್ ಅಧೀಕ್ಷಕರಾದ ಮಲ್ಲಿಕ್ ಸಿ. ಹಾಗೂ ಎಲ್ ನಾಗೇಶ್ ಉಪಸ್ಥಿತರಿದ್ದು ಕವಾಯತು ಕಾರ್ಯಕ್ರಮವನ್ನು ವೀಕ್ಷಿಸಿದರು. ಮತ್ತು ಕಾರ್ಯಕ್ರಮದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು ಎನ್ನಲಾಗುತ್ತಿದೆ.















