ಮನೆ ಸುದ್ದಿ ಜಾಲ ವಿವಿಧ ಚೆಕ್‌ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಭೇಟಿ; ಪರಿಶೀಲನೆ

ವಿವಿಧ ಚೆಕ್‌ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಭೇಟಿ; ಪರಿಶೀಲನೆ

0

ಮೈಸೂರು: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ-2023ಗೆ ಮಾದರಿ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ,  ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಅವರು ಇಂದು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜಯಪುರ ಹೋಬಳಿಯ ಹಾರೋಹಳ್ಳಿ ಚೆಕ್‌ ಪೋಸ್ಟ್ ಹಾಗೂ ಹೆಚ್ .ಡಿ.ಕೋಟೆ ಯ ಕಂಚಮಳ್ಳಿ ಚೆಕ್ ಪೋಸ್ಟ್  ಗೆ ಭೇಟಿ ನೀಡಿ ಪರಿಶೀಲಿಸಿದರು.

Join Our Whatsapp Group

ಈ ಸಂದರ್ಭದಲ್ಲಿ ಚೆಕ್ ಪೋಸ್ಟ್ ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಅಧಿಕಾರಿಗಳು ಸಿಬ್ಬಂದಿಗೆ ನೀಡಲಾದ ಮೂಲಭೂತ ಸೌಕರ್ಯಗಳ ಕುರಿತು ವಿಚಾರಿಸಿದರು. ಅವರ ಕಾರ್ಯವೈಖರಿಯ ಬಗ್ಗೆ ಸಹ ಪರಿಶೀಲಿಸಿದರು.

ಚುನಾವಣೆ ಹಿನ್ನಲೆ ವಾಹನ ತಪಾಸಣೆ ನಡೆಸುತ್ತಿರುವ ಕುರಿತು ಸಾರ್ವಜನಿಕರಿಗೆ ತಿಳಿ ಹೇಳಬೇಕು, ಸಾರ್ವಜನಿಕರೊಂದಿಗೆ ಸೌಹಾರ್ದತೆಯಿಂದ ನಡೆದುಕೊಳ್ಳಬೇಕು. ಚುನಾವಣಾ ಕರ್ತವ್ಯದಲ್ಲಿ ಲೋಪಕ್ಕೆ ಆಸ್ಪದ ನೀಡಬಾರದು. ಪರಸ್ಪರ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಅಕ್ರಮ ಕಂಡು ಬಂದ ಹಿನ್ನಲೆಲ್ಲಿ ಕಾನೂನು ರಿತ್ಯಾ ಕ್ರಮ ಜರುಗಿಸುವಂತೆ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಹೆಚ್ .ಡಿ.ಕೋಟೆ ತಹಶೀಲ್ದಾರ್ ಮಹೇಶ್ ಕುಮಾರ್ ಹಾಗೂ ತಾಲ್ಲೂಕು ಕಚೇರಿಯ ಅಧಿಕಾರಿಗಳು ಉಪಸ್ಧಿತರಿದ್ದರು.