ಮೈಸೂರು(Mysuru): ಸರ್ಕಾರದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳು ಪ್ರತಿ ಮಾಹೆ 3ನೇ ಶನಿವಾರದಂದು ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆಗೆ ಗ್ರಾಮ ಭೇಟಿ ಕಾರ್ಯಕ್ರಮವನ್ನು 2022 ರ ಅಕ್ಟೋಬರ್ 15 ರಂದು ನಂಜನಗೂಡು ತಾಲ್ಲೂಕು ಹುಲ್ಲಹಳ್ಳಿ ಹೋಬಳಿಯ ಬಂಕಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ನಂಜನಗೂಡು ತಾಲ್ಲೂಕು ಹುಲ್ಲಹಳ್ಳಿ ಹೋಬಳಿಯ ಬಂಕಹಳ್ಳಿ ಗ್ರಾಮದ ಗ್ರಾಮಸ್ಥರು, ಗ್ರಾಮಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಮುಂಚಿತವಾಗಿಯೇ ಸಂಬಂಧಪಟ್ಟ ನಾಡಕಛೇರಿ/ಉಪತಹಸೀಲ್ದಾರ್, ರಾಜತ್ವ ನಿರೀಕ್ಷಕರಿಗೆ ತಮ್ಮ ಮನವಿಗಳನ್ನು ಸಲ್ಲಿಸಿ ಪರಿಹಾರ /ಸಮಸ್ಯೆ ಪರಿಸಿಕೊಳ್ಳಲು ತಿಳಿಸಲಾಗಿದೆ.
ಜಿಲ್ಲಾಧಿಕಾರಿಗಳು ಭೇಟಿ ನೀಡಲಿರುವ ತಾಲ್ಲೂಕನ್ನು ಹೊರತುಪಡಿಸಿ, ಉಪವಿಭಾಗಾಧಿಕಾರಿಗಳು ಮತ್ತು ತಹಶೀಲ್ದಾರರು ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಮುರುಡಗಳ್ಳಿ ಗ್ರಾಮ, ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆ ಹೋಬಳಿಯ ಚೆನ್ನಂಗೆರ ಗ್ರಾಮ, ಹೆಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ಉದ್ದೂರು ಗ್ರಾಮ, ಹುಣಸೂರು ತಾಲ್ಲೂಕಿನ ಹನಗೋಡು ಹೋಬಳಿಯ ನಾಗಾಪುರ ಹಾಡಿ-ಬ್ಲಾಕ್ ಗ್ರಾಮ, ಪಿರಿಯಾಪಟ್ಟಣ ತಾಲ್ಲೂಕಿನ ಹಾರನಹಳ್ಳಿ ಹೋಬಳಿಯ ಬೆಣಗಾಲು ಗ್ರಾಮ, ಟಿ.ನರಸೀಪುರ ತಾಲೂಕಿನ ಸೋಸಲೆ ಹೋಬಳಿಯ ದೊಡ್ಡ ಬಾಗಿಲು ಹಾಗೂ ಸರಗೂರು ಹೋಬಳಿಯ ಸರಗೂರು ಶಂಕಹಳ್ಳಿಗೆ ಭೇಟಿ ನೀಡುವರು ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಮಂಜುನಾಥ ಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.