ಮೈಸೂರು: ಕರ್ನಾಟಕ ರಾಜ್ಯ ಸರ್ಕಾರದ ನೂತನ ಕಾರ್ಯಕ್ರಮವಾದ ಮನಮಹೋತ್ಸವಕ್ಕೆ ನಗರದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ “ಉಸಿರಿಗೆ ಹಸಿರು-ಹಸಿರಿಗೆ ಸಸಿಗಳು ಎಂಬ ಅಡಿಬರಹದಲ್ಲಿ” ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹಾದೇವಪ್ಪ ಅವರು ಗಿಡ ನೆಡುವ ಮೂಲಕ ವನಮಹೋತ್ಸವ ಸಪ್ತಾಹಕ್ಕೆ ಚಾಲನೆ ನೀಡದರು.
5 ಕೋಟಿ ಸಸಿ ನೆಡೋಣ, ಕರ್ನಾಟಕದಲ್ಲಿ ಹಸಿರು ಕ್ರಾಂತಿಯ ಹೊದಿಕೆಯ ಮಾಡೋಣ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ ಅಧಿಕಾರಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತ್ತು.
ವನಮಹೋತ್ಸವ ಕಾರ್ಯಕ್ರಮದಲ್ಲಿ ಶಾಸಕರದ ತನ್ವೀರ್ ಸೇಠ್, ಜಿಲ್ಲಾಧಿಕಾರಿಗಳಾದ ಡಾ.ಕೆ ವಿ ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ. ಎಂ ಗಾಯಿತ್ರಿ, ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ ರೆಡ್ಡಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.