ಮನೆ ಸುದ್ದಿ ಜಾಲ ನಾಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರವಾಸ ಕಾರ್ಯಕ್ರಮ

ನಾಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರವಾಸ ಕಾರ್ಯಕ್ರಮ

0

ಮಂಡ್ಯ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಜುಲೈ 15 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.ಬೆಳಿಗ್ಗೆ 09:00 ಗಂಟೆಗೆ ನಾಗಮಂಗಲ ತಾಲ್ಲೂಕಿನ ಶ್ರೀ ಕ್ಷೇತ್ರ ಆದಿ ಚುಂಚನಗಿರಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 10.30 ಗಂಟೆಗೆ ನಾಗಮಂಗಲದ ಎಂ.ಆರ್.ಪಿ ಸಮುದಾಯ ಭವನದಲ್ಲಿ 2025ರ ಪ್ರತಿಭಾ ಪುರಸ್ಕಾರ ಸಮಾರಂಭ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂಧನಾ ಕಾರ್ಯಕ್ರಮದಲ್ಲಿ ಭಾಗವಹಿಸುವುದು.

ಮಧ್ಯಾಹ್ನ 2:00 ಗಂಟೆಗೆ ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಬಗರ್ ಹುಕುಂ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.ಮಧ್ಯಾಹ್ನ 4:00 ಗಂಟೆಗೆ ನಾಗಮಂಗಲ ಪುರಸಭೆಯಲ್ಲಿ ನಾಗಮಂಗಲ ಪುರಸಭೆಯ ಸದಸ್ಯರೊಂದಿಗೆ ಸಭೆ ನಡೆಸಲಿದ್ದಾರೆ.

ಸಂಜೆ 05.30 ಗಂಟೆಗೆ ನಾಗಮಂಗಲ ತಾಲೂಕಿನ ಕುವೆಂಪು ನಗರದಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವತಿಯಿಂದ ಏರ್ಪಡಿಸಲಾಗಿರುವ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ಸಂಜೆ 7.00 ಗಂಟೆಗೆ ಬೆಳ್ಳೂರು ಕ್ರಾಸ್, ಯಡಿಯೂರು, ಕುಣಿಗಲ್, ನೆಲಮಂಗಲ ಮಾರ್ಗವಾಗಿ ಕೇಂದ್ರಸ್ಥಾನ ಬೆಂಗಳೂರು ತಲುಪಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.