ಮೈಸೂರು (Mysuru): ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿದೆ. ಈ ಸಂಬಂಧ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಜಾವೇದ್ ಅಖ್ತರ್ ಸ್ಥಳ ಪರಿಶೀಲನೆ ನಡೆಸಿದರು.
ಜಾವೇದ್ ಅಖ್ತರ್ ಅವರು ಎಸ್.ಪಿ.ಜಿ ಅಧಿಕಾರಿಗಳು ಯೋಗ ನಡೆಯುವ ಅರಮನೆ ಮುಂಭಾಗದ ವೇದಿಕೆ, ಆಯುಷ್ ಇಲಾಖೆಯಿಂದ ವಸ್ತು ಪ್ರದರ್ಶನದ ಸ್ಥಳಗಳ ಪರಿಶೀಲನೆ ನಡೆಸಿ, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಮಾನ್ಯ ಪ್ರಧಾನಮಂತ್ರಿಯವರ ಕಾರ್ಯಕ್ರಮಗಳಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಡಾ.ಬಗಾದಿ ಗೌತಮ್, ಮೈಸೂರು ಪೊಲೀಸ್ ಆಯುಕ್ತರಾದ ಚಂದ್ರಗುಪ್ತ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿಶೇಷ ಭದ್ರತಾ ಪಡೆಯ (ಎಸ್.ಪಿ.ಜಿ) ಅಧಿಕಾರಿಗಳು ಉಪಸ್ಥಿತರಿದ್ದರು.














