ಮನೆ ಅಪರಾಧ ಪಿಎಸ್ ಐ ನೇಮಕಾತಿ ಅಕ್ರಮ: ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಕಲಬುರಗಿಗೆ

ಪಿಎಸ್ ಐ ನೇಮಕಾತಿ ಅಕ್ರಮ: ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಕಲಬುರಗಿಗೆ

0

ಕಲಬುರಗಿ(Kalburgi): ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ, ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸೇರಿ ಐವರನ್ನು ಸಿಐಡಿ ಅಧಿಕಾರಿಗಳು ಶುಕ್ರವಾರ ಮಧ್ಯಾಹ್ನ ಕಲಬುರಗಿಗೆ ಕರೆತಂದರು.

ದಿವ್ಯಾ ಹಾಗರಗಿ ಒಡೆತನದ ಕಲಬುರಗಿಯ ಜ್ಞಾನಜ್ಯೋತಿ ಇಂಗ್ಲಿಷ್‌ ಮಾಧ್ಯಮ ಶಾಲೆಯ ಶಿಕ್ಷಕಿಯರಾದ ಅರ್ಚನಾ, ಸುನಿತಾ, ದಿವ್ಯಾ ಹಾಗೂ ಅವರಿಗೆ ಆಶ್ರಯ ನೀಡಿದ್ದ, ಮಹಾರಾಷ್ಟ್ರದ ಸೊಲ್ಲಾಪುರದ ಮರಳು ವ್ಯಾಪಾರಿಗಳಾದ ಸುರೇಶ ಕಾಟೇಗಾಂವ ಹಾಗೂ ಕಾಳಿದಾಸ ಇವರನ್ನು ಗುರುವಾರ ಮಧ್ಯರಾತ್ರಿ ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಲಾಗಿದೆ.

ಭೀಮಾ ತೀರದ ಮರಳುಗಾರಿಕೆಯಲ್ಲಿ ಸುರೇಶ ಕಾಟೇಗಾಂವ ಅವರ ಹೆಸರು ದೊಡ್ಡದಾಗಿ ಕೇಳಿಬಂದಿತ್ತು. ಈ ಉದ್ಯಮಿ ಜೊತೆ ದಿವ್ಯಾ ಹಾಗೂ ಅವರ ತಂಡಕ್ಕೆ ಹೇಗೆ, ಯಾವಾಗಿನಿಂದ ಸಂಪರ್ಕವಿದೆ ಎಂಬ ಬಗ್ಗೆ ವಿಚಾರಣೆ ನಡೆಸಬೇಕಿದೆ” ಎಂದೂ ಸಿಐಡಿ ಅಧಿಕಾರಿಗಳು  ಮಾಹಿತಿ ನೀಡಿದ್ದಾರೆ.

ಅಕ್ರಮ ನಡೆದ ಕಲಬುರಗಿಯ ಜ್ಞಾನಜ್ಯೋತಿ ಆಂಗ್ಲಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಕಾಶಿನಾಥ, ಪರೀಕ್ಷಾ ಮೇಲ್ವಿಚಾರಕಿಯಾಗಿ ನಿಯೋಜನೆಗೊಂಡಿದ್ದ ಶಿಕ್ಷಕಿ ಸುನಂದಾ, ಇನ್ನೊಬ್ಬ ಅಭ್ಯರ್ಥಿ ಶಾಂತಿಬಾಯಿ ಇನ್ನೂ ತಲೆಮರೆಸಿಕೊಂಡಿದ್ದು, ಸಿಐಡಿ ಅಧಿಕಾರಿಗಳು ಹುಡುಕಾಟ ಮುಂದುವರೆಸಿದ್ದಾರೆ.

ಹಿಂದಿನ ಲೇಖನಜಾಮೀನು ನಿರಾಕರಿಸಲು ಕೇವಲ ಇತರ ಪ್ರಕರಣಗಳಲ್ಲಿ ಭಾಗಿಯಾಗುವುದು ಮಾತ್ರ ಆಧಾರವಾಗುವುದಿಲ್ಲ: ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್
ಮುಂದಿನ ಲೇಖನಜಮೀರ್ ಅಹ್ಮದ್ ಖಾನ್ ಶಾಸಕತ್ವ ರದ್ದಿಗೆ ಪ್ರಮೋದ್ ಮುತಾಲಿಕ್ ಒತ್ತಾಯ