ಮನೆ ಸುದ್ದಿ ಜಾಲ ದೀಪಾವಳಿ: ಪರಿಸರ ಸ್ನೇಹಿ ಪಟಾಕಿಗಳಿಗಷ್ಟೇ ಅವಕಾಶ

ದೀಪಾವಳಿ: ಪರಿಸರ ಸ್ನೇಹಿ ಪಟಾಕಿಗಳಿಗಷ್ಟೇ ಅವಕಾಶ

0

ಬೆಂಗಳೂರು(Bengaluru): ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವ ಹಿನ್ನೆಲೆಯಲ್ಲಿ ಪರಿಸರ ಮಾಲಿನ್ಯ ಮಂಡಳಿಯಿಂದ ಅಗತ್ಯ ಕ್ರಮಕ್ಕೆ ಕೈಗೊಳ್ಳುತ್ತಿದ್ದು, ಕೇವಲ ಪರಿಸರ ಸ್ನೇಹಿ ಪಟಾಕಿಗಳಿಗಷ್ಟೇ ಅವಕಾಶ ನೀಡಲಾಗಿದೆ.

ಒಂದು ವೇಳೆ ಹಸಿರು ಪಟಾಕಿಯನ್ನ ಹೊರತುಪಡಿಸಿ ಬೇರೆ ಪಟಾಕಿ ಇಡುವುದು ಕಂಡುಬಂದರೆ ಮುಲಾಜಿಲ್ಲದೇ ಸೀಜ್ ಮಾಡುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ, ಪೋಲಿಸ್ ಇಲಾಖೆ, ಅಗ್ನಿಶಾಮಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಬಿಬಿಎಂಪಿಗೆ ಸೂಚನೆ ನೀಡಲಾಗಿದೆ.

ರಾತ್ರಿ 8 ಗಂಟೆಯಿಂದ ರಾತ್ರಿ 10 ಗಂಟೆಯವರೆಗೂ ಮಾತ್ರ ಪಾಟಾಕಿ ಹೊಡೆಯಲು ಅವಕಾಶ. ಪರಿಸರ ಸ್ನೇಹಿ ಪಾಟಾಕಿಗಳನ್ನು ಹೊಡೆಯುವಂತೆ ಸಾರ್ವಜನಿಕರಲ್ಲಿ ಜಾಗೃತಿ‌ ಮೂಡಿಸಬೇಕು ಎಂದು ಸೂಚನೆ ನೀಡಲಾಗಿದೆ.

ದೀಪಾವಳಿ ಹಬ್ಬಕ್ಕೂ ಮುಂಚೆ ಹಾಗೂ ನಂತರ ರಾಜಾಧಾನಿ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಎಷ್ಟೇಷ್ಟು ವಾಯುಮಾಲಿನ್ಯ ಹಾಗೂ ಶಬ್ದಮಾಲಿನ್ಯ ಆಗಲಿದೆ ಎನ್ನುವುದನ್ನು ಪತ್ತೆ ಮಾಡಲು ಮಾಪನ ಅಳವಡಿಕೆ ಮಾಡಲಾಗಿದೆ.

ಮಕ್ಕಳಿಗೆ ಪಟಾಕಿ ಕುರಿತು ಜಾಗೃತಿ ಮೂಡಿಸಲು ಶಿಕ್ಷಣ ಇಲಾಖೆಯಿಂದ ವಿಶೇಷ ಕಾರ್ಯಕ್ರಮ ಮಾಡಲಾಗುವುದು. ಪಟಾಕಿ ಸ್ಟಾಲ್’​​ಗಳ ಮೇಲೆ ಹದ್ದಿನ ಕಣ್ಣಿಡಲು ಪೋಲಿಸ್ ಇಲಾಖೆಯಗೂ ಸೂಚನೆ ನೀಡಲಾಗಿದೆ. ಪಾಟಾಕಿಯಿಂದಾಗುವ ತ್ಯಾಜ್ಯವನ್ನು ಹೊರಹಾಕಲು ಘನತ್ಯಾಜ್ಯ ವಾಹನಗಳ ನೇಮಕಕ್ಕೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ. ಪಟಾಕಿಗಳಿಂದಾಗುವ ಹಾನಿಯನ್ನ ತಪ್ಪಿಸಲು ಅಗ್ನಿಶಾಮಕ ಇಲಾಖೆಯೊಂದಿಗೂ ಚರ್ಚೆ ಮಾಡಿದ್ದು, ವಾಯುಮಾಲಿನ್ಯ ಹೆಚ್ಚಾಗದಂತೆ ಮಾಲಿನ್ಯ ನಿಯಂತ್ರಣ ಮಂಡಳಿ ಅಗತ್ಯ ಕ್ರಮ ತೆಗೆದುಕೊಳ್ಳುತ್ತಿದೆ.

ಹಿಂದಿನ ಲೇಖನದೀಪಾವಳಿ, ದಿವಾಲಿಯಾಗದಿರಲಿ, ಕನ್ನಡ ಪದಬಳಕೆ ಸರಿಯಿರಲಿ: ವಿಕ್ರಂ ಅಯ್ಯಂಗಾರ್
ಮುಂದಿನ ಲೇಖನಬಾಲನ್ಯಾಯ ತಿದ್ದುಪಡಿ ಕಾಯ್ದೆ ಅನ್ವಯ ಮಕ್ಕಳ ಮಾಹಿತಿ, ಭಾವಚಿತ್ರ ಬಹಿರಂಗಪಡಿಸುವುದು ಶಿಕ್ಷಾರ್ಹ ಅಪರಾಧ