ಮನೆ ರಾಜ್ಯ ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಾಂಸ್ಕೃತಿಕ ಅತ್ಯಾಚಾರ: ಡಿ.ಕೆ.ಶಿವಕುಮಾರ್

ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಾಂಸ್ಕೃತಿಕ ಅತ್ಯಾಚಾರ: ಡಿ.ಕೆ.ಶಿವಕುಮಾರ್

0

ಬೆಂಗಳೂರು(Bengaluru): ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ಸಾಂಸ್ಕೃತಿಕ ಅತ್ಯಾಚಾರ ನಡೆಯುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.

ಇಂದು ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಠ್ಯ ಪುಸ್ತಕ ಪರಿಷ್ಕರಣೆ ವಿರುದ್ಧ ಸ್ವಾಮೀಜಿಗಳು, ಹಿರಿಯರು, ಸಾಹಿತಿಗಳು ಕೂಡ ಧ್ವನಿ ಎತ್ತಿದ್ದಾರೆ. ಅವರೆಲ್ಲರ ಧ್ವನಿಗೆ ಕಾಂಗ್ರೆಸ್ ಬೆಂಬಲವಾಗಿ ನಿಲ್ಲುತ್ತೆ. ಪಠ್ಯದಲ್ಲಿ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಲಾಗಿದೆ ಎಂದರು.

ಪಠ್ಯ ಪುಸ್ತಕ ಪರಿಷ್ಕರಣೆ ವೇಳೆ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್, ಬಸವಣ್ಣ, ಕುವೆಂಪು ಅವರಂತ ಮಹಾನೀಯರಿಗೆ ಅಪಮಾನ ಮಾಡಲಾಗಿದ್ದು, ಇದನ್ನು ಖಂಡಿಸಿ ಜೂನ್ 9 ರಂದು ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಬೆಳಿಗ್ಗೆ 10ಕ್ಕೆ ಪ್ರತಿಭಟನೆ ಮಾಡುತ್ತೇವೆ. ಪ್ರತಿಭಟನೆಯಲ್ಲಿ ಪಕ್ಷದ ಸಂಸದರು, ಶಾಸಕರು, ಎಂಎಲ್ ​ಸಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಹಿಂದಿನ ಲೇಖನಅಂಗವಿಕಲತೆಯು ಅಂಗಚ್ಛೇದನದ ಫಲಿತಾಂಶವಲ್ಲದಿದ್ದರೂ ಸಹ ‘ಭವಿಷ್ಯದ ನಿರೀಕ್ಷೆಗಳ ನಷ್ಟ’ಕ್ಕೆ ಮೋಟಾರು ಅಪಘಾತ ಪರಿಹಾರವನ್ನು ನೀಡಬಹುದು: ಕರ್ನಾಟಕ ಹೈಕೋರ್ಟ್
ಮುಂದಿನ ಲೇಖನಕಾಂಗ್ರೆಸ್ ತನ್ನ ಎರಡನೇ ಪ್ರಾಶಸ್ತ್ಯದ ಮತವನ್ನು ಜೆಡಿಎಸ್ ಗೆ ನೀಡಲಿ: ಹೆಚ್.ಡಿ.ಕುಮಾರಸ್ವಾಮಿ