ಮನೆ ಸುದ್ದಿ ಜಾಲ BS ಯಡಿಯೂರಪ್ಪ, HD ದೇವೇಗೌಡರನ್ನು ಭೇಟಿಯಾದ ಡಿಕೆ ಶಿವಕುಮಾರ್

BS ಯಡಿಯೂರಪ್ಪ, HD ದೇವೇಗೌಡರನ್ನು ಭೇಟಿಯಾದ ಡಿಕೆ ಶಿವಕುಮಾರ್

0

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಿಗಳಾದ ಹೆಚ್‌ಡಿ ದೇವೇಗೌಡರನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದಾರೆ. ಇಂದು ಬೆಳಗ್ಗೆಯಿಂದಲೇ ರಾಜ್ಯದ ಪ್ರಮುಖ ಗಣ್ಯರ ನಿವಾಸಕ್ಕೆ ಡಿಕೆ ಶಿವಕುಮಾರ್ ತೆರಳುತ್ತಿದ್ದು ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಡಿಕೆ ಶಿವಕುಮಾರ್ ಭೇಟಿಯಾದರು. ಯಡಿಯೂರಪ್ಪ ನಿವಾಸಕ್ಕೆ ಬಂದು ದೇವರಕೋಣೆಗೆ ತೆರಳಿದ ಡಿಕೆ ಶಿವಕುಮಾರ್, ದೇವರಿಗೆ ನಮಸ್ಕರಿಸಿದರು. ನೂತನ ಮುಖ್ಯಮಂತ್ರಿಗಳಿಗೆ ಯಡಿಯೂರಪ್ಪನವರು ಶುಭ ಹಾರೈಸಿದರು ಎನ್ನಲಾಗಿದೆ.

ನಂತರ  ಯಡಿಯೂರಪ್ಪ ನಿವಾಸದಿಂದ ನೇರವಾಗಿ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರ ನಿವಾಸಕ್ಕೆ ತೆರಳಿದರು. ದೇವೇಗೌಡರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ನಾನು ಬರುತ್ತೇನೆ ಎಂದು ಗೌಡರು ಡಯಾಲಿಸಿಸ್ ಮುಂದೂಡಿದ್ದರು ಎಂದು ಡಿಕೆ ಶಿವಕುಮಾರ್ ಹೇಳಿದ್ದರು. ಇದಕ್ಕೂ ಮುನ್ನ ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರನ್ನು ಡಿಕೆ ಶಿವಕುಮಾರ್ ಭೇಟಿಯಾಗಿದ್ದರು. ಮತ್ತೊಂದೆಡೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಿರುವ ಹಿನ್ನೆಲೆ ರಾಮನಗರ ಜಿಲ್ಲೆಯಲ್ಲಿ ಸಂಭ್ರಮ ಮನೆ ಮಾಡಿದೆ. ಡಿಕೆ ಶಿವಕುಮಾರ್ ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಪ್ರಮಾಣವಚನ ವೀಕ್ಷಣೆಗೆ ನಗರದ ಹೃದಯಭಾಗದಲ್ಲಿ ಬೃಹತ್ ಪರದೆಯನ್ನು ಅಳವಡಿಸಲಾಗಿದೆ ಎಂಬುದ್ದಾಗಿದೆ.