ಮನೆ ಸುದ್ದಿ ಜಾಲ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ

ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ

0

ಬೆಂಗಳೂರು (ಜೂನ್ 02): ಡಿಕೆ ಶಿವಕುಮಾರ್ ಅವರು ನಾಳೆ ಸಂಜೆ 4.05ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಶೇಷ ಅಂದ್ರೆ, ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈವರೆಗೂ ರಾಜ್ಯದಲ್ಲಿ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಉದಾಹರಣೆಗಳಿಲ್ಲ. ಹೀಗಾಗಿ ಡಿಕೆ ಶಿವಕುಮಾರ್ ಅವರೇ ಮೊದಲ ಬಾರಿಗೆ ಎಲ್ಲಾ ಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಲಿದ್ದು, ಈಗಾಗಲೇ ಎಲ್ಲಾ ಧರ್ಮ, ಜಾತಿಗಳ ಸುಮಾರು 55 ಸ್ವಾಮೀಜಿಗಳಿಗೆ ಆಹ್ವಾನ ನೀಡಲು ಸೂಚನೆ ನೀಡಲಾಗಿದೆ. ಈ ಮೂಲಕ ಸರ್ವ ಧರ್ಮ ಸಹಿಷ್ಣುತೆ, ಪರಸ್ಪರ ಸಹಬಾಳ್ವೆ, ಶಾಂತಿ ಸೌಹಾರ್ದತೆಯ ಸಂದೇಶ ಸಾರಲು ಮುಂದಾಗಿದ್ದು ಸರ್ವ ಧರ್ಮ, ಸರ್ವ ಸಮುದಾಯದ ಸ್ವಾಮೀಜಿಗಳ ಸಮ್ಮುಖದಲ್ಲಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, 55 ಸ್ವಾಮೀಜಿಗಳು, ಫಾದರ್ , ಮಠಾಧಿಪತಿಗಳು ಹಾಗೂ ಮೌಲ್ವಿಗಳಿಗೆ ಸರ್ಕಾರದಿಂದಲೇ ಅಧಿಕೃತ ಆಹ್ವಾನ ಕಳಿಸಲು ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಇದರ ಬೆನ್ನಲ್ಲೇ ಯಾರಿಗೆಲ್ಲಾ ಆಹ್ವಾನ ನೀಡಬೇಕೆಂದು ಶಿಷ್ಟಾಚಾರ ವಿಭಾಗವು ಡಿ.ಕೆ ಶಿವಕುಮಾರ್ ಕಚೇರಿಯಿಂದ ಪಟ್ಟಿ ಪಡೆದುಕೊಂಡಿದೆ. ಇನ್ನು ಡಿಕೆ ಶಿವಕುಮಾರ್ ಜ್ಯೋತಿಷ್ಯಯನ್ನು ಬಹಳ ನಂಬುವರು. ಹೀಗಾಗಿ ಸ್ವಾಮೀಜಿಗಳು ಹೇಳಿದ ದಿನಾಂಕ, ಸಮಯವನ್ನು ಚಾಚು ತಪ್ಪಿದೆ ಪಾಲನೆ ಮಾಡಲಿದ್ದಾರೆ. ಅದರಂತೆ ಡಿಕೆ ಶಿವಕುಮಾರ್ ಅವರು ಪೂರ್ವಾಭಿಮುಖವಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಲೋಕಭವನದ ಗಾಜಿನ ಮನೆಯಲ್ಲಿ ಪೂರ್ವಾಭಿಮುಖವಾಗಿ ವೇದಿಕೆ ನಿರ್ಮಾಣ ಮಾಡಲಾಗಿದೆ. ಗಾಜಿನ ಮನೆಯಲ್ಲಿ 1100 ರಷ್ಟು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸ್ವಾಮೀಜಿಗಳು, ಧರ್ಮಗುರುಗಳು, ನ್ಯಾಯಾಧೀಶರು, ವಿಶೇಷ ಆಹ್ವಾನಿತರು, ಬೇರೆ ರಾಜ್ಯಗಳ ಸಿಎಂಗಳಿಗೆ ಸೇರಿದಂತೆ ವಿಶೇಷ ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿದುಬಂದಿದೆ.