ಹಾಸನ: ಅವನೊಬ್ಬ ತಲೆತಿರುಕ, ಅವನ ಮಾತನ್ನು ನಂಬುವ ಅವಶ್ಯಕತೆಯಿಲ್ಲ, ಕ್ಷುಲ್ಲಕ ಕಾರಣಗಳನ್ನು ಹೇಳಿ ಮುಸಲ್ಮಾನರ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದಾನೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರನ್ನು ಬಿಜೆಪಿ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪನವರು ಏಕವಚನದಲ್ಲಿ ತರಾಟೆಗೆ ತೆಗೆದುಕೊಂಡರು.
ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡಲು ನಗರಕ್ಕೆ ಆಗಮಿಸಿದಾಗ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಯಾವತ್ತೂ ಹಿಂದೂ-ಮುಸ್ಲಿಂ-ಕ್ರಿಶ್ಚಿಯನ್ ಅಂತ ಭೇದಭಾವ ಮಾಡಲ್ಲ, ತಮಗೆ ಎಲ್ಲರೂ ಒಂದೇ ಎಂದು ಹೇಳಿದರು. ಲೋಕಸಭಾ ಚುನಾವಣೆ ಬಗ್ಗೆ ಮಾತಾಡಿದ ಅವರು, ಎಲ್ಲೆಡೆ ಮೋದಿ ಅಲೆ ಇದೆ, ಹಾಸನದಲ್ಲಿ ಪ್ರಜ್ವಲ್ ಕನಿಷ್ಟ 2 ಲಕ್ಷ ವೋಟುಗಳ ಅಂತರದಿಂದ ಗೆಲ್ಲಲಿದ್ದಾರೆ ಮತ್ತು ರಾಜ್ಯದಲ್ಲಿ ಬಿಜೆಪಿ ಎಲ್ಲ 28 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ ಎಂದು ಯಡಿಯೂರಪ್ಪ ಹೇಳಿದರು.














