ಬೆಂಗಳೂರು: ರಾಜ್ಯದ ಉಪಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಡಿಕೆಶಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಜತೆಗೆ ಎಂಟು ಮಂದಿ ಶಾಸಕರು ಸಚಿವರಾಗಿಯೂ ಪದಗ್ರಹಣ ಮಾಡಿದರು.
ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ನಾಯಕರು, ರಾಜ್ಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರು ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾದರು.