ಕಲಬುರಗಿ : ಡಿಕೆ ಶಿವಕುಮಾರ್ ಒಂದು ಕಾಲನ್ನು ಬಿಜೆಪಿಯಲ್ಲಿ ಇಟ್ಟಿದ್ದು, ಈಗಾಗಲೇ ಬಿಜೆಪಿ ಜೊತೆ ಸಹ ಡಿಕೆಶಿ ಒಂದು ಚರ್ಚೆ ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಯತ್ನಾಳ್, ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡಲು ದೆಹಲಿಯಲ್ಲಿ ವಿಜಯೇಂದ್ರ ಜೊತೆ ಸೇರಿ ಒಂದು ಚರ್ಚೆ ಮಾಡಿದ್ರು. 60 ರಿಂದ 70 ಕಾಂಗ್ರೆಸ್ ಶಾಸಕರನ್ನ ಕರೆತಂದು ನಮಸ್ತೆ ಸದಾ ವತ್ಸಲೇ ಹಾಡ್ತೀವಿ ಅಂತಾ ಹೇಳಿದ್ದಾರೆ. ಈ ಮೂಲಕ ಡಿಕೆಶಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು.
ಆದರೆ ನಮ್ಮ ಆಂತರಿಕ ವರದಿಯಲ್ಲಿ ಡಿಕೆಶಿ ಕಡೆ 12 ಶಾಸಕರು ಇಲ್ಲ ಅಂತಾ ವರದಿ ಬಂತು. ಹೀಗಾಗಿ ನಾವು ಸರ್ಕಾರ ಮಾಡಲು ಪ್ರಯತ್ನಿಸಿಲ್ಲ ಅಂತಾ ಬಿಜೆಪಿ ಹೈಕಮಾಂಡ್ ಹೇಳಿತ್ತು. ವಿಜಯೇಂದ್ರ ಹಾಗೂ ಡಿಕೆಶಿ ಇವರಿಬ್ಬರು ಕುಳಿತುಬಿಟ್ಟಿದ್ದರೆ ಕರ್ನಾಟಕವನ್ನ ಮಾರಾಟ ಮಾಡುತ್ತಿದ್ದರು. ಹೀಗಾಗಿ ಡಿಕೆಶಿ ಬೇಡ ಅಂತಾ ನಮ್ಮವರು ಅಂದಿದ್ರು ಎಂದು ಹೇಳಿದ್ದಾರೆ.
ಡಿಕೆಶಿ ಪಾಪ ನಮಸ್ತೆ ಸದಾ ವತ್ಸಲ್ಯ ಅಂತಾ ಹೇಳಿದ್ರು ನಮಸ್ತೆ ಸೋನಿಯಾ ಮಾತೆ ಇಟ್ಲಿ ಕಾ ಪುತ್ರ ಅಂತಾ ಹಾಡಿದ್ರೆ, ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ತೆಗೆದು ಸೋನಿಯಾ ಗಾಂಧಿ ಡಿಕೆಶಿಯನ್ನ ಸಿಎಂ ಮಾಡುತ್ತಿದ್ದರು. ಭಾರತ ಮಾತೆಗೆ ನಮಸ್ತೆ ಅಂದ್ರೆ ಇವರಿಗೆ ನೋವಾಗುತ್ತದೆ. ಇಟ್ಲಿ ಮಾತೆಗೆ ಒಂದು ಹಾಡು ಕಟ್ಟಿ ಹಾಡಬೇಕು. ಸೋನಿಯಾ ಮಾತೆ ಅಂತಾ ಹಾಡಿದ್ರೆ ಡಿಕೆಶಿ 24 ಗಂಟೆಯಲ್ಲಿ ಸಿಎಂ ಆಗುತ್ತಾರೆ ಎಂದು ಟೀಕಿಸಿದ್ದಾರೆ.















