ಮನೆ ಸ್ಥಳೀಯ ಜನರ ಪ್ರಾಣ ಉಳಿಸುವ ಪುಣ್ಯ ಕಾರ್ಯಗಳನ್ನು ಮಾಡಿ: ಆರ್. ಲೋಕನಾಥ್

ಜನರ ಪ್ರಾಣ ಉಳಿಸುವ ಪುಣ್ಯ ಕಾರ್ಯಗಳನ್ನು ಮಾಡಿ: ಆರ್. ಲೋಕನಾಥ್

0

ಮೈಸೂರು: ಜಿಲ್ಲೆಯಲ್ಲಿರುವ ರಸ್ತೆಗಳ ಸಮಸ್ಯೆಗಳನ್ನು ಪರಿಹರಿಸಿ ಸಾರ್ವಜನಿಕರ ಪ್ರಾಣ ಉಳಿಸುವ ಕಡೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳಾದ ಆರ್ ಲೋಕನಾಥ್‌ರವರು ತಿಳಿಸಿದರು.

ಇಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ರಸ್ತೆ ಸುರಕ್ಷತೆ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಾಣವಾಗಿರುವ ಕೆಲವು ರಸ್ತೆಗಳಲ್ಲಿ ತಾಂತ್ರಿಕ ತೊಂದರೆಗಳು ಹಾಗೂ ರಸ್ತೆಗಳಲ್ಲಿನ ಸಮಸ್ಯೆಗಳನ್ನು ಬಗೆಹರಿಸಬೇಕು.

ಬಾಕ್ಸ್ ಸ್ಪಾಟ್‌ಗಳನ್ನು ಗುರುತಿಸಿ ಅವುಗಳನ್ನು ಸರಿಪಡಿಸುವ ಕಾರ್ಯವನ್ನು ಮಾಡಬೇಕು. ಮೈಸೂರಿನಿಂದ ವರಕೋಡು ಹೋಗುವ ರಸ್ತೆಯಲ್ಲಿ ಅಪಘಾತಗಳು ಹೆಚ್ಚಾಗುತ್ತಿದ್ದು, ರಸ್ತೆಯು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೇರಿದು (NH-76) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ರಸ್ತೆಗಳನ್ನು ಸುರಕ್ಷತೆಗೆ ಸಂಬoಧಿಸಿದoತೆ ಕಾಮಗಾರಿಗಳನ್ನು ನಡೆಸಬೇಕು. ರಸ್ತೆಗಳನ್ನು ಸರಿಪಡಿಸಿ ಸುರಕ್ಷತಾ ಸೂಚನಾ ಫಲಕಗಳನ್ನು ಅಳವಡಿಸಬೇಕು.

ಮಹಾನಗರ ಪಾಲಿಕೆ ವತಿಯಿಂದ ನಗರದ ವಿವಿಧ ರಸ್ತೆಗಳಲ್ಲಿ ಅಭಿವೃದ್ಧಿ ಕಾರ್ಯಗಳು ಸಾಗುತ್ತಿದ್ದು ಜೊತೆಗೆ ಹೊಸ ಸಿಗ್ನಲ್ ಗಳ ಅಳವಡಿಕೆ ಕೂಡ ನಡೆಯುತ್ತಿದ್ದು, ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯವನ್ನು ನಿರ್ವಹಿಸಬೇಕು ಎಂದು ತಿಳಿಸಿದರು.

ಮೈಸೂರು-ಹುಣಸೂರು ರಸ್ತೆ ಮತ್ತು ಮೈಸೂರು -ಟಿ ನರಸೀಪುರ ರಸ್ತೆಯಲ್ಲಿ ಅಪಘಾತಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗುತ್ತಿದ್ದು, ಸ್ಥಳಗಳನ್ನು ಪರಿಶೀಲಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕು. ಅಪಘಾತ ಸಂಭವಿಸಿದ ಸ್ಥಳಗಳಿಗೆ ಪೊಲೀಸ್ ಇಲಾಖೆ, ಆರ್.ಟಿ.ಓ ಮತ್ತು ಪಿ.ಡಬ್ಲ್ಯೂ.ಡಿ ಇಲಾಖೆಯು ಜೊತೆಗೂಡಿ ತನಿಖೆಯನ್ನು ನಡೆಸಿ ವರದಿಯನ್ನು ಸಲ್ಲಿಸಬೇಕು. ಜಿಲ್ಲೆಯಲ್ಲಿ ಈವರೆಗೂ ನಡೆದಿರುವ ಅಪಘಾತಗಳ ಸಂಖ್ಯೆಗಳನ್ನು ಮುಂದಿನ ದಿನಗಳಲ್ಲಿ ಇಳಿಕೆ ಮಾಡುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ನಡೆದಿರುವ ಅಪಘಾತಗಳಿಗೆ ಸಂಬoಧಿಸಿದoತೆ ಚಾಲಕರ ನಿರ್ಲಕ್ಷದಿಂದ ಆಗಿರುವ ಅಪಘಾತಗಳಲ್ಲಿ ಚಾಲಕರ ವಾಹನ ಪರವಾನಗಿಯನ್ನು ರದ್ದುಪಡಿಸಲಾಗುತ್ತಿದ್ದು, ಈಗಾಗಲೇ ಒಟ್ಟು 86 ಪ್ರಕರಣಗಳಲ್ಲಿ 50 ವಾಹನ ಪರವಾನಗಿಯನ್ನು ರದ್ದುಪಡಿಸಲಾಗಿದೆ ಎಂದು ಆರ್.ಟಿ.ಒ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದರು.

ಹಿಂದಿನ ಲೇಖನಅಣ್ಣನ ಮಗನನ್ನು ಗುಂಡಿಕ್ಕಿ ಹತ್ಯೆಗೈದ ರೌಡಿ
ಮುಂದಿನ ಲೇಖನಹಿಡಿದೆ ನಿನ್ನ ಪಾದ