ಡಾಲಿ ಧನಂಜಯ್ ಹಾಗೂ ತೆಲುಗಿನ ಸತ್ಯದೇವ್ ನಟನೆಯ ಜೀಬ್ರಾ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.ಮೋಷನ್ ಪೋಸ್ಟರ್ನಲ್ಲಿ ಸತ್ಯರಾಜ್, ಸತ್ಯ ಅಕ್ಕಲಾ, ಜೆನ್ನಿಫರ್ ಪಿಕ್ಕಿನಾಟೊ, ಸುನಿಲ್, ಪ್ರಿಯಾ ಭವಾನಿ ಶಂಕರ್, ಡಾಲಿ ಧನಂಜಯ್ ಮತ್ತು ಸತ್ಯ ದೇವ್ ಅವರನ್ನು ಪರಿಚಯಿಸಲಾಗಿದೆ.
ಜೀಬ್ರಾ ಸಿನಿಮಾವನ್ನ ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದಾರೆ. ಕ್ರೈಂ ಮತ್ತು ಥ್ರಿಲ್ಲರ್ ಕಂಟೆಂಟ್ ಇರುವ ಚಿತ್ರ ಇದಾಗಿದೆ.
ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್ ಗಳ ಅಡಿಯಲ್ಲಿ ಎಸ್.ಎನ್ ರೆಡ್ಡಿ, ಎಸ್ ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಈ ಚಿತ್ರವನ್ನು ನಿರ್ಮಿಸಿದ್ದಾರೆ. ರವಿ ಬಸ್ರೂರು ಚಿತ್ರಕ್ಕೆ ಸಂಗೀತ ನೀಡಿದ್ದು, ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣವಿದೆ.
ಮೋಷನ್ ಪೋಸ್ಟರ್ ಜೊತೆಗೆ ಚಿತ್ರತಂಡ ಬಿಡುಗಡೆ ದಿನಾಂಕ ಕೂಡ ಘೋಷಣೆ ಮಾಡಿದೆ.ಅ.31 ರಂದು ಚಿತ್ರ ತೆರೆಗೆ ಬರಲಿದೆ.