ನಾಮಕಾವಸ್ಥೆ ಕುರ್ಚಿ ಉಳಿಸಿಕೊಳ್ಳಲು ಸಚಿವರಾಗುವುದು ಬೇಡ: ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು(Bengaluru): ಕೇವಲ ನಾಮಾಕವಸ್ಥೆ ಹಾಗೂ ಕುರ್ಚಿ ಉಳಿಸಿಕೊಳ್ಳುವ ಬದಲು ಪಕ್ಷ, ಸರ್ಕಾರ ಮತ್ತು ಸಂಘಟನೆಗೆ ಹೆಸರು ತರುವಂತಹ ಕೆಲಸಗಳನ್ನು ಸಚಿವರು ಮಾಡಬೇಕು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ(M.P.Renukacharya) ಅವರು ಸಚಿವರ ವಿರುದ್ಧ ಕಿಡಿಕಾರಿದ್ದಾರೆ. ಸಚಿವರಾದವರು ಉಸ್ತುವಾರಿ ವಹಿಸಿಕೊಂಡ ನಂತರ ಜಿಲ್ಲೆ ಹಾಗೂ ತಾಲ್ಲೂಕುಗಳಲ್ಲಿ ಸಂಚರಿಸಿ ಪಕ್ಷ , ಸರ್ಕಾರ ಹಾಗೂ ಸಂಘಟನೆಗೆ ಹೆಸರು  ತರುವ ಕೆಲಸ ಮಾಡಬೇಕು. ಕೇವಲ  ಕುರ್ಚಿ ಮತ್ತು ಸ್ವಾರ್ಥ ಮುಖ್ಯವಾಗಬಾರದೆಂದು  ಚಾಟಿ ಬೀಸಿದರು. ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮುಖ್ಯಮಂತ್ರಿ ಬಸವರಾಜ … Continue reading ನಾಮಕಾವಸ್ಥೆ ಕುರ್ಚಿ ಉಳಿಸಿಕೊಳ್ಳಲು ಸಚಿವರಾಗುವುದು ಬೇಡ: ಎಂ.ಪಿ.ರೇಣುಕಾಚಾರ್ಯ