ಮನೆ ಅಪರಾಧ ಉತ್ತರ ಪ್ರದೇಶದಲ್ಲಿ ಡಬಲ್ ಡೆಕ್ಕರ್ ಬಸ್‌ಗಳ ಅಪಘಾತ: 8 ಮಂದಿ ಸಾವು, 16 ಮಂದಿಗೆ ಗಾಯ

ಉತ್ತರ ಪ್ರದೇಶದಲ್ಲಿ ಡಬಲ್ ಡೆಕ್ಕರ್ ಬಸ್‌ಗಳ ಅಪಘಾತ: 8 ಮಂದಿ ಸಾವು, 16 ಮಂದಿಗೆ ಗಾಯ

0

ಉತ್ತರ ಪ್ರದೇಶ(Uttapradesh): ದೆಹಲಿಗೆ ಸಂಚರಿಸುತ್ತಿದ್ದ ಡಬಲ್ ಡೆಕ್ಕರ್ ಬಸ್ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ನಿಂತಿದ್ದ ಮತ್ತೊಂದು ಡಬಲ್ ಡೆಕ್ಕರ್ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ 8  ಮಂದಿ ಮೃತಪಟ್ಟು, 16 ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಈ ಕುರಿತು ಮಾಹಿತಿ ನೀಡಿರುವ ಬಾರಾಬಂಕಿಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ (ಎಎಸ್‌ಪಿ) ಮನೋಜ್ ಪಾಂಡೆ, ಬಿಹಾರದ ಸೀತಾಮರ್ಹಿಯಿಂದ ಬರುತ್ತಿದ್ದ ಬಸ್ ನರೇಂದ್ರಪುರ ಮದ್ರಹಾ ಗ್ರಾಮದ ಬಳಿ ನಿಂತಿದ್ದ ಬಸ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ಹೇಳಿದ್ದಾರೆ.

ಮೃತರನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಲಖನೌ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ರಸ್ತೆ ಅಪಘಾತದಲ್ಲಿ ಮೃತರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಹಿಂದಿನ ಲೇಖನಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಹೋರಾಟಕ್ಕೆ ಹೆಚ್’ಡಿಕೆ ಬೆಂಬಲ
ಮುಂದಿನ ಲೇಖನಬೇಬಿ ಬೆಟ್ಟದಲ್ಲಿ ಟ್ರೈಯಲ್ ಬ್ಲಾಸ್ಟ್ ವಿರೋಧಿಸಿ ರೈತರ ಪ್ರತಿಭಟನೆ