ಮನೆ ಅಪರಾಧ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣ : ಮಾಜಿ ಸಚಿವ ವೀರಕುಮಾರ ಪಾಟೀಲ ಪುತ್ರ ಪ್ರೀತಮ್...

ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣ : ಮಾಜಿ ಸಚಿವ ವೀರಕುಮಾರ ಪಾಟೀಲ ಪುತ್ರ ಪ್ರೀತಮ್ ಬಂಧನ!

0

ಬೆಳಗಾವಿ: ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವೀರಕುಮಾರ ಪಾಟೀಲ ಪುತ್ರ ಪ್ರೀತಮ್‌ನನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ವೈಷ್ಣವಿ ಹಗವಣೆ ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಮುಖ ಆರೋಪಿಗಳಿಗೆ ಆಶ್ರಯ ಹಾಗೂ ಆರ್ಥಿಕ ನೆರವು ನೀಡಿದ ಆರೋಪದ ಮೇಲೆ ಮಾಜಿ ಸಚಿವ ವೀರಕುಮಾರ ಪಾಟೀಲ ಪುತ್ರ ಪ್ರೀತಮ್ ಅವರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.

ವೈಷ್ಣವಿ ಹಗವಣೆ ಎಂಬ ಯುವತಿಯು ವರದಕ್ಷಿಣೆ ಕಿರುಕುಳದಿಂದಾಗಿ ಕೊಲೆಯಾಗಿದ್ದಾಗಿ ಅನುಮಾನ ವ್ಯಕ್ತವಾಗಿದ್ದು, ಈ ಕುರಿತು ಪ್ರಮುಖ ಆರೋಪಿಗಳಾದ ವೈಷ್ಣವಿಯ ಮಾವ ರಾಜೇಂದ್ರ ಹಾಗೂ ಮೈದುನ ಸುಶೀಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಈ ಆರೋಪಿಗಳ ಪರವಾಗಿ ಹಣಕಾಸು ಸಹಾಯ ಹಾಗೂ ಆಶ್ರಯ ನೀಡಿದ ಆರೋಪವಿದ್ದ ಪ್ರೀತಮ್, ಬಂಧನಕ್ಕೊಳಗಾಗಿರುವುದು ವಿವಾದಕ್ಕೆ ಹೊಸ ತಿರುವು ನೀಡಿದೆ.

ಪ್ರೀತಮ್ ಪಾಟೀಲ ಬೃಹತ್ ರಾಜಕೀಯ ಹಿನ್ನೆಲೆ ಹೊಂದಿದ್ದು, ಅವರು ವಿಜಯನಗರದ ಪ್ರಭಾವಶಾಲಿ ರಾಜಕಾರಣಿ ಹಾಗೂ ಮಾಜಿ ಸಚಿವ ವೀರಕುಮಾರ ಪಾಟೀಲ ಪುತ್ರ. ಅಲ್ಲದೆ, ಪ್ರೀತಮ್ ರಾಜ್ಯದ ಪ್ರಭಾವಿ ಕಾಂಗ್ರೆಸ್ ನಾಯಕ ಹಾಗೂ ಸಚಿವ ಸತೀಶ ಜಾರಕಿಹೊಳಿ ಆಪ್ತರಾಗಿದ್ದಾರೆ ಎನ್ನಲಾಗಿದೆ.

ಕೊಲೆ ಆರೋಪಿಗಳು ಅಜೀತ ಪವಾರ ಬಣದ ಎನ್‌ಸಿಪಿ ಪಕ್ಷದ ಮುಖಂಡರಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ ವೈಷ್ಣವಿ ಕೊಲೆ ಪ್ರಕರಣ ಸಂಚಲನ ಮೂಡಿಸಿದೆ.