ಮೈಸೂರು: ಪತಿ, ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು ವಿಷಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.
ವಿಜಯಲಕ್ಷ್ಮೀ(35) ಮೃತ ದುರ್ದೈವಿ.
ವಿಜಯಲಕ್ಷ್ಮೀ ದಾಂಪತ್ಯ ಜೀವನಕ್ಕೆ ಕಾಲಿಟ್ಟು 12 ವರ್ಷಗಳಾಗಿವೆ. ಎರಡು ಮುದ್ದಾದ ಮಕ್ಕಳಿವೆ. ಆದರೆ ವರದಕ್ಷಿಣೆಗಾಗಿ ಅತ್ತೆ, ಮಾವ, ಮೈದುನ ಮತ್ತು ಪತಿ ಕಿರುಕುಳ ತಾಳದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube