ಮನೆ ಸುದ್ದಿ ಜಾಲ ಮೈಸೂರು ಜಿಲ್ಲೆಯ ನೂತನ ಅಡಿಷನಲ್‌ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಡಾ.ಬಿ.ಎನ್.ನಂದಿನಿ

ಮೈಸೂರು ಜಿಲ್ಲೆಯ ನೂತನ ಅಡಿಷನಲ್‌ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡ ಡಾ.ಬಿ.ಎನ್.ನಂದಿನಿ

0

ಮೈಸೂರು (Mysuru): ಮೈಸೂರು ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್‌ ಅಧೀಕ್ಷಕರಾಗಿ ಡಾ.ಬಿ.ಎನ್.ನಂದಿನಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.

ರಾಜ್ಯ ಸರ್ಕಾರವು ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾಲ್ವರು ಹೆಚ್ಚುವರಿ ಪೊಲೀಸ್‌ ಅಧೀಕ್ಷಕರನ್ನು ವರ್ಗಾವಣೆಗೊಳಿಸಿ ಆದೇಶವನ್ನು ಹೊರಡಿಸಿದೆ.

ನಂದಿನಿ ಅವರು ಹಾಸನ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೈಸೂರಿನಲ್ಲಿ ಹೆಚ್ಚುವರಿ ಅಧೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಆರ್‌.ಶಿವಕುಮಾರ್‌ ಅವರನ್ನು ರಾಯಚೂರು ಜಿಲ್ಲೆಯ ಹೆಚ್ಚುವರಿ ಅಧೀಕ್ಷಕರನ್ನಾಗಿ ವರ್ಗಾವಣೆ ಮಾಡಿದ ಹಿನ್ನೆಲೆ ನಂದಿನಿ ಅವರು ಅಧಿಕಾರ  ವಹಿಸಿಕೊಂಡಿದ್ದಾರೆ.