ಮನೆ ರಾಜ್ಯ ಏ.14ರಂದು ಡಾ.ಬಿಆರ್ ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ

ಏ.14ರಂದು ಡಾ.ಬಿಆರ್ ಅಂಬೇಡ್ಕರ್ ಜಯಂತಿ ಆಚರಣೆ ಕಡ್ಡಾಯ : ಸರ್ಕಾರದಿಂದ ಅಧಿಕೃತ ಆದೇಶ

0

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ಜಯಂತಿಯನ್ನು ರಾಜ್ಯದಲ್ಲಿ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಏಪ್ರಿಲ್.14, 2025ರಂದು ಕಡ್ಡಾಯವಾಗಿ ಆಚರಿಸುವಂತೆ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ರಾಜ್ಯದಲ್ಲಿ 2024-25ನೇ ಶೈಕ್ಷಣಿಕ ವರ್ಷ ದಿನಾಂಕ: 10.04.2025ರಂದು ಮುಕ್ತಾಯವಾಗುತ್ತದೆ ದಿನಾಂಕ :14.04.2025 ರಂದು ಸಂವಿಧಾನ ಶಿಲ್ಪಿ ಡಾ|| ಬಿ. ಆರ್. ಅಂಬೇಡ್ಕರ್‌ರವರ ಜಯಂತಿಯನ್ನು ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಆಚರಿಸಲು ಕ್ರಮವಹಿಸುವಂತೆ ಉಲ್ಲೇಖಿತ ಸುತ್ತೋಲೆಯಲ್ಲಿ ಈಗಾಗಲೇ ಸೂಚಿಸಲಾಗಿದೆ.ದ

ಮುಂದುವರೆದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಸಿಬ್ಬಂದಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ DOT: 14.04.20250 ಸೋಮವಾರದಂದು ಸಂವಿಧಾನ ಶಿಲ್ಪಿ ಡಾ ಬಿ. ಆರ್. ಅಂಬೇಡ್ಕರ್‌ವರ ಜಯಂತಿಯನ್ನು ಪ್ರತಿ ವರ್ಷದಂತೆ ಕಡ್ಡಾಯವಾಗಿ ಆಚರಿಸಲು ನಿಯಮಾನುಸಾರ ಅಗತ್ಯ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಉಪನಿರ್ದೇಕರು (ಅಭಿವೃದ್ಧಿ)ರವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಶಾಲಾ ಮುಖ್ಯಸ್ಥರಿಗೆ ತಿಳಿಸಿದೆ.