ಮನೆ ಮನರಂಜನೆ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಡಾ.ರಮೇಶ್ ಅರವಿಂದ್ ಆಯ್ಕೆ

ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಡಾ.ರಮೇಶ್ ಅರವಿಂದ್ ಆಯ್ಕೆ

0

ಕೋಟ(ಬ್ರಹ್ಮಾವರ): ಕೋಟತಟ್ಟು ಗ್ರಾಮ ಪಂಚಾಯಿತಿ, ಕೋಟ ಡಾ.ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನದ ಸಹಭಾಗಿತ್ವದಲ್ಲಿ ಕೊಡಮಾಡುವ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ನಟ ಡಾ.ರಮೇಶ್ ಅರವಿಂದ್ ಅವರನ್ನು ಆಯ್ಕೆ ಮಾಡಲಾಗಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ.ಕುಂದರ್, ಅ.10ರಂದು ಕೋಟ ಶಿವರಾಮ ಕಾರಂತರ ಜನ್ಮ ದಿನದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು‌ ಎಂದು ತಿಳಿಸಿದರು.

ಹಿಂದೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಾದ ವೀರಪ್ಪ ಮೊಯ್ಲಿ, ಎಂ.ಎನ್‌.ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಬಿ.ಜಯಶ್ರೀ, ಡಾ.ಮೋಹನ ಆಳ್ವ, ಸಾಲುಮರದ ತಿಮ್ಮಕ್ಕ, ಚಿಟ್ಟಾಣಿ, ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ.ಬಿ.ಎಂ.ಹೆಗ್ಡೆ,ಪ್ರಕಾಶ್ ರೈ, ಶ್ರೀಪಡ್ರೆ, ಕವಿತಾ ಮಿಶ್ರಾ, ಡಾ.ಎಸ್.ಎಲ್.ಭೈರಪ್ಪ , ಗಿರೀಶ್ ಭಾರಧ್ವಾಜ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕೋಟತಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅಶ್ವಿನಿ ದಿನೇಶ್, ಆಯ್ಕೆ ಸಮಿತಿ ಸದಸ್ಯ ಯು.ಎಸ್. ಶೆಣೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕನಿರ್ದೇಶಕಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಾಸು ಪೂಜಾರಿ, ಪಿಡಿಒ ಜಯರಾಮ್ ಶೆಟ್ಟಿ, ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ ಇದ್ದರು.

ಹಿಂದಿನ ಲೇಖನಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾ ಆಚರಣೆಗೆ ಅವಕಾಶ ನಿರಾಕರಣೆ
ಮುಂದಿನ ಲೇಖನಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಅಪರಾಧಿಗೆ 3 ವರ್ಷ ಜೈಲು